ಬಾಗಲಕೋಟೆ: ಜಿಲ್ಲೆಯಲ್ಲಿ 129 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ. ಹೊಸದಾಗಿ 188 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣ ಶುಕ್ರವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 7883 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 6633 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 56, ಬಾದಾಮಿ 49, ಹುನಗುಂದ 39, ಬೀಳಗಿ 18, ಮುಧೋಳ 7, ಜಮಖಂಡಿ 19 ಜನರಲ್ಲಿ ಸೋಂಕು ದೃಢಪಟ್ಟಿದೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ, 2552 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 79231 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 68484 ನೆಗೆಟಿವ್ ಪ್ರಕರಣ, 7883 ಪಾಜಿಟಿವ್ ಪ್ರಕರಣ ಹಾಗೂ 85 ಜನ ಮೃತ ಪ್ರಕರಣ ವರದಿಯಾಗಿರುತ್ತದೆ.
ಇನ್ನು 1165 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 217 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್ ಝೋನ್ 665 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.