ETV Bharat / state

ಬಾಗಲಕೋಟೆ: 296 ಜನ ಸೋಂಕಿನಿಂದ ಗುಣಮುಖ: 171 ಹೊಸ ಪ್ರಕರಣಗಳು ಪತ್ತೆ - 296 people cured from corona

ಬಾಗಲಕೋಟೆ ಜಿಲ್ಲೆಯಲ್ಲಿಂದು 296 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. 171 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3826ಕ್ಕೆ ಏರಿಕೆಯಾಗಿದೆ.

ಬಾಗಲಕೋಟೆ
ಬಾಗಲಕೋಟೆ
author img

By

Published : Aug 14, 2020, 9:37 PM IST

ಬಾಗಲಕೋಟೆ: ಜಿಲ್ಲೆಯಲ್ಲಿ 296 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಹೊಂದಿದ್ದು, ಹೊಸದಾಗಿ 171 ಕೊರೊನಾ ಪ್ರಕರಣಗಳು ಶುಕ್ರವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 3826 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 2803 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಸೋಂಕು ಕಂಡವರಲ್ಲಿ ಬಾಗಲಕೋಟೆ ತಾಲೂಕಿನ 40, ಬಾದಾಮಿ 17, ಹುನಗುಂದ 31, ಬೀಳಗಿ 6, ಮುಧೋಳ 68, ಜಮಖಂಡಿ 9 ಜನ ಇದ್ದು, ಅವರನ್ನು ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯ 1318 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 596 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 41803 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 36372 ನೆಗೆಟಿವ್ ಪ್ರಕರಣ, 3826 ಪಾಜಿಟಿವ್ ಪ್ರಕರಣ ಹಾಗೂ 55 ಜನ ಮೃತ ಪ್ರಕರಣ ವರದಿಯಾಗಿರುತ್ತದೆ.

ಇನ್ನು 969 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 192 ಸ್ಯಾಂಪಲ್‍ಗಳು ರಿಜೆಕ್ಟ್​​ ಆಗಿವೆ. ಕಂಟೇನ್​​ಮೆಂಟ್​​ ಝೋನ್ 223 ಇದ್ದು, ಇನ್‍ಸ್ಟಿಟ್ಯೂಶನಲ್​ ಕ್ವಾರಂಟೈನ್‍ನಲ್ಲಿದ್ದ 8207 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.