ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಬಾದವಾಡಗಿ ಗ್ರಾಮದ ನಾಗರಾಜ ಕಲಗೋಡಿ ಎಂಬ ಯುವಕ ರಾಷ್ಟ್ರಮಟ್ಟದ ಥ್ರೋ ಬಾಲ್ಗೆ ಆಯ್ಕೆಯಾಗಿದ್ದು, ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ.
ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಬಾದವಾಡಗಿ ಗ್ರಾಮದ ನಾಗರಾಜ ಕಲಗೋಡಿ ಎಂಬ ಯುವಕ ಥ್ರೋ ಬಾಲ್ನಲ್ಲಿ ರಾಷ್ಟ್ರಮಟ್ಟದ ತಂಡಕ್ಕೆ ಆಯ್ಕೆಯಾಗಿದ್ದು, ಇತ್ತೀಚಿಗೆ ದುಬೈದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ತೃತೀಯ ಸ್ಥಾನ ಪಡೆದಿದ್ದರು. ಇನ್ನು ಡಿಸೆಂಬರ್ ತಿಂಗಳಲ್ಲಿ ಮಲೇಷ್ಯಾದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಜ್ಜಾಗುತ್ತಿದ್ದಾರೆ.
ಈ ರಾಷ್ಟ್ರೀಯ ತಂಡದಲ್ಲಿ ನಮ್ಮ ಯುವಕ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ನಾಗರಾಜ್ ಕಲಗೋಡಿಯಂತಹ ಗ್ರಾಮೀಣ ಪ್ರತಿಭೆಯನ್ನು ಇನ್ನಷ್ಟು ಪ್ರೋತ್ಸಾಹ ನೀಡಲು ಸ್ಥಳೀಯ ಎಸ್ಆರ್ಕೆಕ ಫೌಂಡೇಶನ್ ಹಾಗೂ ವಿವಿಧ ಸಂಸ್ಥೆಗಳು ಸಹಾಯ ಮಾಡುತ್ತಿದ್ದು,ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹಾಗೂ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಎಸ್.ಜಿ.ನಂಜಯ್ಯನಮಠ ನೇತೃತ್ವದಲ್ಲಿ ಯುವ ಪ್ರತಿಭೆ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿಜಯಾನಂದ ಕಾಶಪ್ಪನವರ ಮಾತನಾಡಿ,ಥ್ರೋ ಬಾಲ್ ಕ್ರೀಡೆಯಲ್ಲಿ ಭಾರತ ಪ್ರತಿನಿಧಿಯಾಗಿ ನಮ್ಮ ಕ್ಷೇತ್ರದ ಗ್ರಾಮೀಣ ಪ್ರತಿಭೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವ ಶ್ಲಾಘನೀಯವಾಗಿದೆ. ಎಸ್.ಆರ್.ಕೆ.ಫೌಂಡೇಶನ್ ವತಿಯಿಂದ ಪ್ರೋತ್ಸಾಹಿಸಲಾಗುವುದು ಎಂದರು.