ಬಾಗಲಕೋಟೆ: ರಾಜ್ಯ ಸರ್ಕಾರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಪ್ರಕಟಿಸಿದ್ದು, ಕೊನೆಗೂ ಜನಪ್ರತಿನಿಧಿಗಳು ಅಧಿಕಾರದ ಚುಕ್ಕಾಣಿ ಹಿಡಿಯುವ ಕಾಲ ಕೂಡಿ ಬಂದಿದೆ.
ಬಾಗಲಕೋಟೆ ನಗರಸಭೆ ಅಧ್ಯಕ್ಷ ಸ್ಥಾನ ಎಸ್.ಸಿ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ನೀಡಿ ಮೀಸಲಾತಿ ಪ್ರಕಟಿಸಲಾಗಿದೆ.
ನಗರಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದು, ಜ್ಯೋತಿ ಕೇಶವ ಭಂಜತ್ರಿ ಎಂಬುವರು ಅಧ್ಯಕ್ಷ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ. ಇನ್ನು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಆಗಿದ್ದರಿಂದ ಪುರುಷ ಸದಸ್ಯರಿಗೆ ನೀಡುವ ಬಗ್ಗೆ ಚರ್ಚೆ ನಡೆದಿದೆ.
ಬಸವರಾಜ ಅವರಾದಿ, ಶ್ರೀನಿವಾಸ ಸಜ್ಜನ್, ಶಿವಕುಮಾರ್ ಬಳ್ಳಾರಿ, ರವಿ ದಾಮಜಿ, ವೀರಣ್ಣ ಸಿರಗಣ್ಣನವರ ಎಂಬುವರು ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದಾರೆ. ಆದರೆ ಯಾರು ಉಪಾಧ್ಯಕ್ಷರಾಗಬೇಕು ಎಂಬುದನ್ನು ಶಾಸಕ ವೀರಣ್ಣ ಚರಂತಿಮಠ ಅಂತಿಮಗೊಳಿದ್ದಾರೆ ಎಂದು ತಿಳಿದು ಬಂದಿದೆ.