ETV Bharat / state

ಬಾಗಲಕೋಟೆ: ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ

ಮಹಾತ್ಮಾ ಗಾಂಧಿಜೀಯವರ ಜಯಂತಿ ನಿಮಿತ್ತ ಕರವೇ ಸಂಘಟನೆ ಹಾಗೂ ರೈತ ಸಂಘಟನೆಯಿಂದ ಸರದಿ ಉಪವಾಸ ಸತ್ಯಾಗ್ರಹ, ಪ್ರತಿಭಟನೆ ನಡೆಸಲಾಯಿತು.

Bagalkot: Peaceful protest against land amendment act
ಬಾಗಲಕೋಟೆ: ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ
author img

By

Published : Oct 2, 2020, 7:15 PM IST

ಬಾಗಲಕೋಟೆ: ಮಹಾತ್ಮಾ ಗಾಂಧಿಜೀಯವರ ಜಯಂತಿ ನಿಮಿತ್ತ ಕರವೇ ಸಂಘಟನೆ ಹಾಗೂ ರೈತ ಸಂಘಟನೆಯಿಂದ ಸರದಿ ಉಪವಾಸ ಸತ್ಯಾಗ್ರಹ, ಪ್ರತಿಭಟನೆ ನಡೆಸಲಾಯಿತು.

ಬಾಗಲಕೋಟೆ: ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ

ಜಿಲ್ಲಾಡಳಿತ ಭವನದ ಹೊರಗಡೆ ವೇದಿಕೆ ನಿರ್ಮಾಣ ಮಾಡಿ, ಸರದಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಜೀಯವರ ಜಯಂತಿ ನಿಮಿತ್ತ ವೇದಿಕೆಯಲ್ಲಿ ಭಾವಚಿತ್ರಕ್ಕೆ ಪುಷ್ಪ ಮಾಲಾರ್ಪಣೆ ಮಾಡಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ, ಕರವೇ ಮುಖಂಡರಾದ ರಮೇಶ ಬದನ್ನೂರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ಕಾಯ್ದೆ ಜಾರಿಗೆ ತರುತ್ತಿದೆ. ಎಪಿಎಂಸಿ ತಿದ್ದುಪಡಿ ಕಾಯ್ದೆ, ರೈತರ ನೂತನ ಕಾಯ್ದೆ ಜಾರಿಗೆ ತರದೇ ಈ ಕೂಡಲೇ ನಿರ್ಧಾರ ಹಿಂದಕ್ಕೆ ಪಡೆಯಬೇಕು. ಸ್ವಾತಂತ್ರ್ಯಕ್ಕಾಗಿ ಮಹಾತ್ಮಾ ಗಾಂಧೀಜಿಯವರು ಶಾಂತಿಯುತವಾಗಿ ಹೋರಾಟ ನಡೆಸಿದ್ದರು. ಅದೇ ಮಾದರಿಯಲ್ಲಿ ಅವರ ಜಯಂತಿಯ ದಿನವೇ ಶಾಂತಿಯುತವಾದ ಪ್ರತಿಭಟನೆ ಹಮ್ಮಿಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುತ್ತಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.