ETV Bharat / state

ಬಾಗಲಕೋಟೆ: ಯಾವುದೇ ಆತಂಕವಿಲ್ಲದೆ ಪಿಯುಸಿ ಇಂಗ್ಲಿಷ್​​ ಪರೀಕ್ಷೆ ಮುಕ್ತಾಯ - Bagalkot DC

ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ 21,109 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 20,413 ವಿದ್ಯಾರ್ಥಿಗಳು ಹಾಜರಾಗಿ 696 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ. ಇನ್ನೂ ಯಾವುದೇ ಆತಂಕವಿಲ್ಲದೆ ಪರೀಕ್ಷೆ ಮುಕ್ತಾಯವಾಗಿರುವುದಕ್ಕೆ ಜಿಲ್ಲಾಧಿಕಾರಿ ಸಂತಸಗೊಂಡಿದ್ದಾರೆ.

Bagalkot: PUC English Exam ended without bad anxieties with students
ಬಾಗಲಕೋಟೆ: ಆತಂಕವಿಲ್ಲದೆ ಪಿಯುಸಿ ಇಂಗ್ಲೀಷ್​ ಪರೀಕ್ಷೆ ಮುಕ್ತಾಯ
author img

By

Published : Jun 18, 2020, 9:54 PM IST

ಬಾಗಲಕೋಟೆ: ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್​​ ಪರೀಕ್ಷೆ ಇಂದು ಮುಕ್ತಾಯವಾಗಿದೆ. ಇನ್ನು ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಭೇಟಿ ನೀಡಿ ಪರಿಶೀಲಿಸಿದರು.

ನವನಗರದ ಎಸ್.ಬಿ.ಪಾಟೀಲ್​ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಬಸವೇಶ್ವರ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು.

ಕೋವಿಡ್ ಹಿನ್ನೆಲೆ ವಿದ್ಯಾರ್ಥಿಗಳಿಗೆ ಒದಗಿಸಿದ ಸುರಕ್ಷತೆ, ಮಾಸ್ಕ್​​ ಧರಿಸಿರುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡ ಬಗ್ಗೆ, ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಮಾಸ್ಕ್, ಕೈಗಳಿಗೆ ಗ್ಲೌಸ್ ಧರಿಸಿದನ್ನು ಪರಿಶೀಲಿಸಿದರು.

ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ 21,109 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 20,413 ವಿದ್ಯಾರ್ಥಿಗಳು ಹಾಜರಾಗಿ 696 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ. ಇದರಲ್ಲಿ ಬೇರೆ ಜಿಲ್ಲೆಗಳಿಂದ 734 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದು, ಈ ಪೈಕಿ 732 ವಿದ್ಯಾರ್ಥಿಗಳು ಹಾಜರಾಗಿ ಇಬ್ಬರು ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ.

ಈ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿರುವುದಿಲ್ಲ. ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಬರೆದಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ ಜಿಲ್ಲೆಯಾದ್ಯಂತ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ 280 ಬಸ್‍ಗಳನ್ನು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರಲು ವ್ಯವಸ್ಥೆ ಮಾಡಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.