ETV Bharat / state

ಬಾಗಲಕೋಟೆ: ಜನವರಿ 14 ರಿಂದ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ - siddshri international film festival

ಈ ಬಾರಿ ಸಿದ್ದಶ್ರೀ ಪ್ರಶಸ್ತಿಗೆ ಭಾಜನರಾದ ವಿಜಯ್ ಸಂಕೇಶ್ವ- ಅಂತಾರಾಷ್ಟ್ರಿಯ ಚಲನಚಿತ್ರೊತ್ಸವದಲ್ಲಿ ಚಿತ್ರರಂಗದ ಖ್ಯಾತ ನಟ, ನಟಿಯರು ಭಾಗಿ- ಕಾರ್ಯಕ್ರಮ ಉದ್ಘಾಟಿಸಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ

bagalkot-sri-siddhashree-national-festival-from-14th-to-16th-january
ಬಾಗಲಕೋಟೆ: ಜನವರಿ 14 ರಿಂದ 16ರವರೆಗೆ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ
author img

By

Published : Jan 8, 2023, 6:51 PM IST

ಬಾಗಲಕೋಟೆ: ಜನವರಿ 14 ರಿಂದ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸಿದ್ದನಕೊಳ್ಳದ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಜಾತ್ರ ಮಹೋತ್ಸವವನ್ನು ಜನವರಿ 14 ರಿಂದ 16 ರಂದು ಹಮ್ಮಿಕೊಳ್ಳಲಾಗಿದೆ ಎಂದು ಡಾ. ಶಿವಕುಮಾರ ಮಹಾಸ್ವಾಮಿಗಳು ತಿಳಿಸಿದರು.

ಉತ್ಸವದ ಅಂಗವಾಗಿ ನವನಗರದ ಪತ್ರಿಕಾ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಶಿವಕುಮಾರ ಮಹಾಸ್ವಾಮಿಗಳು, ಈಗಾಗಲೇ ಪ್ರತಿ ವರ್ಷ, ಸಾಧನೆ ಮಾಡಿದ ವ್ಯಕ್ತಿಗೆ ಸಿದ್ದಶ್ರೀ ಪ್ರಶಸ್ತಿ ನೀಡಲಾಗುತ್ತಿದ್ದು, ಅದೇ ರೀತಿ ಈ ಬಾರಿ ಖ್ಯಾತ ಉದ್ಯಮಿ ವಿಆರ್​ಎಲ್​ ಸಂಸ್ಥೆಯ ಸಂಸ್ಥಾಪಕ ವಿಜಯ ಸಂಕೇಶ್ವರ ಅವರಿಗೆ ಸಿದ್ದಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೊತೆಗೆ ಶ್ರೀ ಸಿದ್ದಶ್ರಿ ರಾಷ್ಟ್ರೀಯ ಉತ್ಸವದಲ್ಲಿ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕನ್ನಡದ ಖ್ಯಾತ ಚಿತ್ರ ನಟಿ ಪ್ರೀಯಾಂಕ ಉಪೇಂದ್ರ, ಪ್ರೇಮಾ, ನಿರ್ದೇಶಕ ಓಂ ಪ್ರಕಾಶ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಚಿತ್ರ ನಟರು ಹಾಗೂ ಗಣ್ಯವ್ಯಕ್ತಿಗಳು ಈ ಒಂದು ರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದಿನಾಂಕ 14 ರಂದು ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಗುಳೇದಗುಡ್ಡದ ಅಭಿನವ ಕಾಡಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮುರನಾಳದ ಮಳಿಯಪ್ಪಜ್ಜನವರು, ಹೆಬ್ಬಳ್ಳಿಯ ಶಹಬುದ್ದೀನ್ ಜಾಲಿಹಾಳ ವಹಿಸಲಿದ್ದು, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್​ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ರಾಷ್ಟ್ರೀಯ ಕಿಸಾನ್ ಸಮಿತಿ ನಿರ್ದೇಶಕರಾದ ಡಾ. ಆರ್.ಎ ರಾಜು ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಹುನಗುಂದ ಮತಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ವೀಣಾ ಕಾಶಪ್ಪನವರ್ ಹಾಗೂ ತಹಶಿಲ್ದಾರರಾದ ಬಸವರಾಜ ಮೆಳವಂಕಿ, ಹುನಗುಂದ ತಾಲೂಕಿನ ತಹಸಶಿಲ್ದಾರ ಬಸಲಿಂಗಪ್ಪ ನಾಯ್ಕೋಡಿ ಅವರು ಕಾರ್ಯಕ್ರಮದ ಜ್ಯೋತಿ ಬೆಳಗುವವರು. ದಿನಾಂಕ 15 ರಂದು ಸಾಯಂಕಾಲ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಚಿತ್ತರಗಿ ಗುರುಮಹಾಂತಸ್ವಾಮಿಗಳು, ಅಂಕಲಿಮಠ ವೀರಭದ್ರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು.

ಇದನ್ನೂ ಓದಿ: ಕರ್ನಾಟಕ ಅಂದ್ರೆ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಗೌರವ ಇಲ್ಲ: ಡಿಕೆಶಿ

ಹುನಗುಂದ ಮತಕ್ಷೇತ್ರದ ಶಾಸಕ ದೊಡ್ಡನಗೌಡ ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.

ಸಂಜೆ ನಡೆಯುವ ಕಾರ್ಯಕ್ರಮಗಳ ಪಟ್ಟಿ: ಖ್ಯಾತ ಗಾಯಕರು ಮತ್ತು ಸಂಗೀತಕಾರರಿಂದ ಸಂಗೀತ ಕಾರ್ಯಕ್ರಮಗಳು, ಭರತನಾಟ್ಯ ನೃತ್ಯ ಪ್ರದರ್ಶನ, ಅಲ್ಬಂ ಸಾಗ್ ಬಿಡುಗಡೆ, ಪವಾಡ ಬಯಲು ಕಾರ್ಯಕ್ರಮ, ಜನಪದ ಗಾಯನ, ರಸಮಂಜರಿಗಳು ಕಾರ್ಯಕ್ರಮಗಳು ನಡೆಯಲಿವೆ.

ಜನವರಿ 14 ರಂದು ರಥೋತ್ಸವ ಇರುವ ಹಿನ್ನಲೆ, ರಥಕ್ಕೆ ಹೆಲಿಕಾಪ್ಟರ್ ಮೂಲಕ ಪುಷ್ಪ ಸರ್ಮಪಣೆ ನೇರವೇರಿಸಲಾಗುವುದು, ಕಳೆದ ಎರಡು ವರ್ಷಗಳಿಂದ ಕೋವಿಡ್​ ವೈರಸ್​ ಹಿನ್ನಲೆ ಕೇವಲ ಸರಳವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಮಾತ್ರ ಹಮ್ಮಿಕೊಂಡು ಸರಳವಾಗಿ ಆಚರಣೆ ಮಾಡಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಕೆಲವೊಂದು ಚಲನಚಿತ್ರ ಟೀಸರ್​ ಬಿಡುಗಡೆ ಸೇರಿದಂತೆ, ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗಳು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಚರಂತಿಮಠ, ಸಂತೋಷ ಹೊಕ್ರಾಣಿ, ವಿಜಯ ಸುಲಾಖೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೀದರ್​ ಉತ್ಸವಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಚಾಲನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.