ಬಾಗಲಕೋಟೆ : ಜಿಲ್ಲಾ ಸಹಕಾರಿ ಬ್ಯಾಂಕಿನ ಚುನಾವಣೆಗೆ ನ. 5ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷದ ಘಟಾನುಘಟಿಗಳು ಸ್ಪರ್ಧೆಗಿಳಿದಿರುವುದರಿಂದ ಪ್ರತಿಷ್ಠಿತ ಕಣವಾಗಿ ಮಾರ್ಪಟ್ಟಿದೆ.
ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್.ಆರ್.ಪಾಟೀಲ್, ಮಾಜಿ ಸಚಿವ ಹೆಚ್.ವೈ.ಮೇಟಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಡಿಸಿಸಿ ಬ್ಯಾಂಕಿನ ಹಿಂದಿನ ಅಧ್ಯಕ್ಷರಾದ ಅಜೇಯ ಕುಮಾರ್ ಸರನಾಯಕ ಕಾಂಗ್ರೆಸ್ ಪಕ್ಷದ ಪ್ರಮುಖರಾಗಿದ್ದಾರೆ.
ಬಿಜೆಪಿ ಪಕ್ಷದ ವತಿಯಿಂದ ಬಸವೇಶ್ವರ ಬ್ಯಾಂಕಿನ ಅಧ್ಯಕ್ಷರಾದ ಪ್ರಕಾಶ ತಪಶೆಟ್ಟಿ, ಶಾಸಕ ಸಿದ್ದ ಸವದಿ ಸಹೋದರರು ಸೇರಿದಂತೆ ಇನ್ನಿತರರು ಕಣದಲ್ಲಿದ್ದಾರೆ.
ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದರಿಂದ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಗೆಲುವಿನ ಹಾದಿಯತ್ತ ಮುನ್ನಗ್ಗುತ್ತಿದ್ದಾರೆ.