ಬಾಗಲಕೋಟೆ: ಜಿಲ್ಲೆಯಲ್ಲಿ 184 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 132 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 6042 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 5175 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 411 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 289 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 58972 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 52210 ನೆಗಟಿವ್ ಪ್ರಕರಣ, 6042 ಪಾಸಿಟಿವ್ ಪ್ರಕರಣ ಹಾಗೂ 73 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. 794 ಮಾತ್ರ ಸಕ್ರಿಯ ಪ್ರಕರಣಗಳು ಇವೆ.