ETV Bharat / state

ಬಾಗಲಕೋಟೆ ಜಿಲ್ಲಾ ಪಂಚಾಯತ್​ಗೆ ಬಾಯಕ್ಕ ಮೇಟಿ ನೂತನ ಸಾರಥಿ

ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಹಿನ್ನಲೆ ತೆರವಾಗಿದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಹೆಚ್.ವೈ. ಮೇಟಿ ಅವರ ಪುತ್ರಿ ಬಾಯಕ್ಕ ಮೇಟಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

author img

By

Published : May 29, 2019, 6:50 PM IST

ಬಾಯಕ್ಕ ಮೇಟಿ

ಬಾಗಲಕೋಟೆ : ಜಿಲ್ಲಾ ಪಂಚಾಯತ್​ ನೂತನ ಅಧ್ಯಕ್ಷರಾಗಿ ಬಾಯಕ್ಕ ಮೇಟಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗೂಬಾಯಿ ಮಾನಕರ್ ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

ನೂತನ ಅಧ್ಯಕ್ಷರಾದ ಬಳಿಕ ಈಟಿವಿ ಭಾರತ ಪ್ರತಿನಿಧಿಯೊಂದಿಗೆ​ ಮಾತನಾಡಿದ ಅವರು, ಭ್ರೂಣ ಹತ್ಯೆ ತಡೆಯಲಾಗುವುದು, ಶಿಕ್ಷಣ ಮತ್ತು ಸ್ವಚ್ಛತಾ ಕಾರ್ಯಕ್ರಮಕ್ಕೆ ಹೆಚ್ಚು ಒತ್ತು‌ ನೀಡಲಾಗುವುದು ಎಂದು ತಿಳಿಸಿದರು.

ನೂತನ​ ಅಧ್ಯಕ್ಷರಾಗಿ ಬಾಯಕ್ಕ ಮೇಟಿ ಅಧಿಕಾರ ಸ್ವೀಕಾರ

ಹಿಂದಿನ ಅಧ್ಯಕ್ಷೆ ವೀಣಾ ಕಾಶಪ್ಪನವರ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜಿಲ್ಲೆಯಲ್ಲಿ ಗಮನ ಸೆಳೆದಿದ್ದರು. ನನ್ನ ಅಧಿಕಾರವಧಿಯಲ್ಲಿ ಜನ ಸಂಪರ್ಕ ಕಾರ್ಯಕ್ರಮ ಮಾಡುವ ಜೊತೆಗೆ ರಸ್ತೆ, ಕುಡಿಯುವ ನೀರಿಗೆ ಮೊದಲ ಆದ್ಯತೆ ‌ನೀಡುತ್ತೇನೆ. ಎಲ್ಲ ಸದಸ್ಯರು, ಅಧಿಕಾರಿಗಳ ಸಹಕಾರದಿಂದ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ಕೊಡುವುದಾಗಿ ಭರವಸೆ ನೀಡಿದರು.

ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ರಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಪಕ್ಷದ ಮುಖಂಡರ ಮಾತುಕತೆಯಿಂದಾಗಿ‌ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಮಾಜಿ ಸಚಿವ ಹೆಚ್.ವೈ. ಮೇಟಿ ಅವರ ಪುತ್ರಿ ಬಾಯಕ್ಕ ಮೇಟಿ ಅವರಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬಾಯಕ್ಕ ಮೇಟಿ ನೂತನ ಅಧ್ಯಕ್ಷೆಯಾಗಿ ಪದಗ್ರಹಣ ಮಾಡಿದರು.

Intro:Anchor

Body:ಬಾಗಲಕೋಟೆ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಬಾಯಕ್ಕ ಮೇಟಿ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗೂಬಾಯಿ ಮಾನಕರ್ ನೂತನ ಅಧ್ಯಕ್ಷರಿಗೆ ಹೂ ಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.
ನೂತನ ಅಧ್ಯಕ್ಷರಾದ ಬಳಿಕ ಬಾಯಕ್ಕ ಮೇಟಿ ಈ ಟವಿ ಭಾರತ ದೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡು,ಭ್ರೂಣ ಹತ್ಯ ತಡೆಯುವದು, ಶಿಕ್ಷಣ ಮತ್ತು ಸ್ವಚ್ಚತಾ ಕಾರ್ಯಕ್ರಮ ಕ್ಕೆ ಹೆಚ್ಚು ಒತ್ತು‌ ನೀಡಲಾಗುವದು ಎಂದು ತಿಳಿಸಿದ ಅವರು,ಹಿಂದಿನ ಅಧ್ಯಕ್ಷರಾದ ವೀಣಾ ಕಾಶಪ್ಪನವರ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಗಮನ ಸೆಳೆದಿದ್ದರು.ಬಾಯಕ್ಕ ಮೇಟಿ ಅವರು,ಜನ ಸಂಪರ್ಕ ಮಾಡುವ ಜೊತೆಗೆ,ರಸ್ತೆ,ಕುಡಿಯುವ ನೀರಿಗೆ ಮೊದಲ ಆದ್ಯತೆ ‌ನೀಡಲಾಗುವದು ಎಲ್ಲ ಸದಸ್ಯರ ,ಅಧಿಕಾರಿಗಳ ಸಹಕಾರ ದಿಂದ ಜಿಲ್ಲೆಯ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದರು.ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ,ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗಿರುವ ಹಿನ್ನಲೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.ಕಾಂಗ್ರೆಸ್ ಪಕ್ಷದ ಮುಖಂಡರ ಮಾತುಕತೆಯಿಂದಾಗಿ‌ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಮಾಜಿ ಸಚಿವ ಎಚ್ ವೈ ಮೇಟಿ ಅವರ ಪುತ್ರಿ ಬಾಯಕ್ಕ ಮೇಟಿ ಅವರಿಗೆ ನೀಡಲಾಗಿತ್ತು.ಈ ಹಿನ್ನೆಲೆಯಲ್ಲಿ ಇಂದು ಬಾಯಕ್ಕ ಮೇಟಿ ಅಧಿಕಾರ ಸ್ವೀಕಾರ ಮಾಡಿಕೊಂಡು, ಜಿಲ್ಲೆಯ ಅಭಿವೃದ್ಧಿ ಗಾಗಿ ಶ್ರಮಿಸುವುದಾಗಿ ತಿಳಿಸಿದ್ದಾರೆ..

Conclusion:ಆನಂದ
ಈ ಟಿವಿ,ನ್ಯೂಸ್, ಬಾಗಲಕೋಟೆ..

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.