ETV Bharat / state

ಶಾಲಾ ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಾಯಕ್ಕ ಮೇಟಿ

ಡಿಸೆಂಬರ 11 ರಿಂದ 31 ವರೆಗೆ ವಿಶೇಷ ಶಾಲಾ ಮಕ್ಕಳ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಬಾಗಲಕೋಟೆಯಲ್ಲಿ ಈ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಬಾಯಕ್ಕ ಮೇಟಿ ಚಾಲನೆ ನೀಡಿದರು.

vaccination campaign
ಲಸಿಕಾ ಅಭಿಯಾನ
author img

By

Published : Dec 11, 2019, 10:06 PM IST

ಬಾಗಲಕೋಟೆ: ಜಿಲ್ಲೆಯಾದ್ಯಂತ ಡಿಸೆಂಬರ್ 11 ರಿಂದ 31 ವರೆಗೆ ಹಮ್ಮಿಕೊಂಡ ವಿಶೇಷ ಶಾಲಾ ಮಕ್ಕಳ ಲಸಿಕಾ ಅಭಿಯಾನಕ್ಕೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಚಾಲನೆ ನೀಡಿದರು.

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಈ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗಂಟಲಮುರಿ, ನಾಯಿ ಕೆಮ್ಮು ಮತ್ತು ಧನುರ್ವಾಯು ರೋಗವನ್ನು ತಡೆಗಟ್ಟುವ ಲಸಿಕೆ ಇದಾಗಿದ್ದು, ತಪ್ಪದೇ ಮಕ್ಕಳು ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ತಾಲೂಕ್ ಪಂಚಾಯತಿ ಅಧ್ಯಕ್ಷರಾದ ಚನ್ನಗೌಡ ಪರನಗೌಡರ ಮಾತನಾಡಿ, ರೋಗ ಬಾರದಂತೆ ಮುನ್ನೆಚ್ಚರಿಕೆಯಾಗಿ ಈ ಲಸಿಕೆಯನ್ನು ಉಚಿತವಾಗಿ ನೀಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ಲಸಿಕೆ ಹಾಕಲು ಶಾಲೆಗೆ ಬಂದಾಗ ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು. ಅಲ್ಲದೇ ಮಕ್ಕಳಲ್ಲಿ ಸೇವಿಸುವ ಆಹಾರ ಪದ್ದತಿ ಕೂಡಾ ಹಿತಮಿತವಾಗಿರಬೇಕು ಎಂದು ಸಲಹೆ ನೀಡಿದ್ರು.

Intro:AnchorBody:ಶಾಲಾ ಮಕ್ಕಳ ಲಸಿಕಾ ಅಭಿಯಾನಕ್ಕೆ ಬಾಯಕ್ಕ ಮೇಟಿ ಚಾಲನೆ

ಬಾಗಲಕೋಟೆ--ಜಿಲ್ಲೆಯಾದ್ಯಂತ ಡಿಸೆಂಬರ 11 ರಿಂದ 31 ವರೆಗೆ ಹಮ್ಮಿಕೊಂಡ ವಿಶೇಷ ಶಾಲಾ ಮಕ್ಕಳ ಲಸಿಕಾ ಅಬಿಯಾನಕ್ಕೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಚಾಲನೆ ನೀಡಿದರು.
ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿಂದು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಸಹಯೋಗದಲ್ಲಿ ಹಮ್ಮಿಕೊಂಡ ಈ ಅಭಿಯಾನಕ್ಕೆ ಚಾಲನೆ ಮಾತನಾಡಿದ ಅವರು ಗಂಟಲಮುರಿ,ನಾಯಿ ಕೆಮ್ಮು ಮತ್ತು ಧನುರ್ವಾಯು ರೋಗವನ್ನು ತಡೆಗಟ್ಟುವ ಲಸಿಕೆ ಇದಾಗಿದ್ದು, ತಪ್ಪದೇ ಮಕ್ಕಳು
ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದರು.
ತಾಲೂಕಾ ಪಂಚಾಯತಿಯ ಅಧ್ಯಕ್ಷರಾದ ಚನ್ನಗೌಡ ಪರನಗೌಡರ ಮಾತನಾಡಿ ರೋಗ
ಬರದಂತೆ ಮುನ್ನೆಚ್ಚರಿಕೆಯಾಗಿ ಈ ಲಸಿಕೆಯನ್ನು ಉಚಿತವಾಗಿ ನೀಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಈ ಅಭಿಯಾನವನ್ನು ಹಮ್ಮಿಕೊಂಡಿದ್ದು, ತಮ್ಮ ತಮ್ಮ ಶಾಲೆಗಳಿಗೆ ಲಸಿಕೆ ನೀಡಲು ಬಂದಾಗ ತಪ್ಪದೇ
ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಅಲ್ಲದೇ ಮಕ್ಕಳಲ್ಲಿ ಸೇವಿಸುವ ಆಹಾರ ಪದ್ದತಿ ಕೂಡಾ
ಹಿತಿಮಿತವಾಗಿರಬೇಕು ಎಂದರು.
ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ ಮಾತನಾಡಿ ರೋಗ ಬರದಂತೆ ತಡೆಯುವಕಾರ್ಯ ಇದಾಗಿದೆ. ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಇಂದ್ರಧನುಷ್ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆದ ಹಿನ್ನಲೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿದನ್ನು ನಾವು ಇಲ್ಲಿ ಗಮನಿಸಬಹುದಾಗಿದೆ. ಆದ್ದರಿಂದ ಶಾಲಾ ಮಕ್ಕಳ ತಪ್ಪದೇ ಡಿಪಿಟಿ
ಹಾಗೂ ಟಿಡಿ ಲಸಿಕೆಗಳನ್ನು ತಪ್ಪದೇ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಂತ ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿ ಲಸಿಕಾ ಅಭಿಯಾನದಡಿ ಜಿಲ್ಲೆಯಲ್ಲಿರುವ 5 ರಿಂದ 6 ವರ್ಷದ ಮಕ್ಕಳಿಗೆ ಡಿಪಿಟಿ ವರ್ಧಕ
ಲಸಿಕೆಯನ್ನು ಹಾಗೂ 7 ರಿಂದ 16 ವರ್ಷದ ಮಕ್ಕಳಿಗೆ ಟಿಡಿ ಲಸಿಕೆಯನ್ನು ನೀಡಲಾಗುತ್ತಿದೆ.
ಜಿಲ್ಲೆಯಾದ್ಯಂತ 5 ರಿಂದ 16 ವರ್ಷದೊಳಗಿನ ಒಟ್ಟು 427196 ಮಕ್ಕಳಿ ಲಸಿಕೆಯನ್ನು ಹಾಕಲಾಗುತ್ತಿದೆ ಎಂದು ತಿಳಿಸಿದರು. ಈ ಲಸಿಕೆಯಿಂದ ಯಾರು ಭಯ ಪಡುವ ಅಗತ್ಯವಿಲ್ಲವೆಂದು ತಿಳಿಸಿದರು. ನಂತರ
ಮಕ್ಕಳಿಗೆ ಲಸಿಕೆಯನ್ನು ಹಾಕಲಾಯಿತು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ,
ಲಸಿಕಾ ಕಾರ್ಯಕ್ರಮದಲ್ಲಿ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ.ಕುಸುಮಾ ಮಾಗಿ ಬಾಲಕಿಯರ ಸರಕಾರಿ ಪ.ಪೂ ಕಾಲೇಜಿನ ಉಪ ಪ್ರಾಚಾರ್ಯ ಮಲ್ಲಿಕಾರ್ಜುನ
ದೊಡ್ಡಪ್ಪನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.