ETV Bharat / state

ಹೆಣ್ಣು-ಗಂಡು ಲಿಂಗ ತಾರತಮ್ಯ ಹೋಗಲಾಡಿಸಿ: ಸಿಇಓ ಮಾನಕರ - Beti Bachao Beti Padao Progaram at Bgalkot

ಲಿಂಗಾನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾದರೆ ಮಹಾ ಭಾರತದಲ್ಲಿ ದ್ರೌಪದಿಗೆ 5 ಜನ ಗಂಡಂದಿರು ಇರುವ ಪರಿಸ್ಥಿತಿ ಬರಬಹುದು. ಈ ಪರಿಸ್ಥಿತಿ ಬರದಂತೆ ನೋಡಿಕೊಳ್ಳಬೇಕಾದರೆ ಹೆಣ್ಣು ಮಕ್ಕಳನ್ನು ರಕ್ಷಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಸಂರಕ್ಷಣೆ , ಪೋಷಣೆ ಹಾಗೂ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ಬಾಗಲಕೋಟೆ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಹೇಳಿದರು.

Beti Bachao Beti Padao Progaram at Bgalkot
ಸಿಇಓ ಮಾನಕರ
author img

By

Published : Jan 23, 2020, 5:28 AM IST

ಬಾಗಲಕೋಟೆ: ಗಂಡು ಮಗು ಹುಟ್ಟಿದಾಗ ಸಂಭ್ರಮಪಡುವ ಹಾಗೆ ಹೆಣ್ಣು ಹುಟ್ಟಿದಾಗಲು ಸಂಭ್ರಮ ಪಡುವ ಮೂಲಕ ಲಿಂಗ ತಾರತಮ್ಯ ಹೋಗಲಾಡಿಸಬೇಕು ಎಂದುಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ "ಮಗಳನ್ನು ಉಳಿಸಿ, ಮಗಳನ್ನು ಓದಿಸಿ" ಸಪ್ತಾಹ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಹೆಣ್ಣು ಮತ್ತು ಗಂಡು ಎಂಬ ಲಿಂಗಬೇಧ ಮಾಡಬಾರದು. ಹೆಣ್ಣು ಹುಟ್ಟುತ್ತಿದೆ ಎಂದು ತಿಳಿದರೆ ಸಾಕು ಗರ್ಭದಲ್ಲಿರುವಾಗಲೇ ಅದನ್ನು ತೆಗೆದು ಹಾಕುವ ಕೆಲಸ ನಡೆಯುತ್ತಿದೆ. ವೈದ್ಯರು ಸಹ ಹುಟ್ಟುವ ಮಗು ಯಾವುದೆಂದು ತಿಳಿಸುವುದು ಅಪರಾಧವಾಗಿದೆ. ಅಂತಹ ಘಟನೆಗಳು ಕಂಡು ಬಂದಲ್ಲಿ ಶಿಕ್ಷೆಗೆ ಒಳಪಡಿಸಲಾಗುತ್ತದೆ. ನಮ್ಮ ರಾಜ್ಯದಲ್ಲಿ ಲಿಂಗಾನುಪಾತ ಪ್ರತಿ ಸಾವಿರ ಗಂಡು ಮಕ್ಕಳಿಗೆ 948 ಹೆಣ್ಣು ಮಕ್ಕಳು ಇದ್ದಾರೆ. ದೇಶಕ್ಕೆ ಹೋಲಿಸಿದರೆ ಈ ಸಂಖ್ಯೆ ಬಹಳಷ್ಟು ಕಡಿಮೆ ಇದೆ
ಎಂದರು.

ಲಿಂಗಾನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾದರೆ ಮಹಾ ಭಾರತದಲ್ಲಿ ದ್ರೌಪದಿಗೆ 5 ಜನ ಗಂಡಂದಿರು ಇರುವ ಹಾಗೆ ಪರಿಸ್ಥಿತಿ ಬರಬಹುದು. ಈ ಪರಿಸ್ಥಿತಿ ಬರದಂತೆ ನೋಡಿಕೊಳ್ಳಬೇಕಾದರೆ ಹೆಣ್ಣು ಮಕ್ಕಳನ್ನು ರಕ್ಷಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಸಂರಕ್ಷಣೆ , ಪೋಷಣೆ ಹಾಗೂ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ ಎಂದರು.

ಸಮಾಜದಲ್ಲಿ ಎಲ್ಲಾ ಬಗೆಯ ಲಿಂಗತಾರತಮ್ಯಗಳನ್ನು ಕೊನೆಗೊಳಿಸಬೇಕು. ಹೆಣ್ಣು ಶಿಸುವಿನ ಹುಟ್ಟಿಗೆ ಮತ್ತು ಬದುಕಿಗೆ ಮಾರಕವಾಗಿರುವ ಎಲ್ಲಾ ಅಂಶಗಳನ್ನು ಹೊಡೆದೋಡಿಸಿ, ಹೆಣ್ಣು ಮಗುವಿನ ಶಿಕ್ಷಣಕ್ಕೆ ಹಾಗೂ ಅವಳಿಗೆ ಲಭಿಸಬೇಕಾದ ಪ್ರೀತಿ, ವಾತ್ಸಲ್ಯ, ಸುರಕ್ಷತೆ ಹಾಗೂ ಪೋಷಣೆ ದೊರೆಯುವಂತೆ ನೋಡಿಕೊಳ್ಳುವ ಮೂಲಕ ದೇಶದ ಶಕ್ತಿಶಾಲಿ ಹಾಗೂ ಸಮಾನ ಅಧಿಕಾರಗಳನ್ನು ಹೊಂದಿದ ಪ್ರಜೆಯಾಗುವಂತೆ ರೂಪುಗೊಳಿಸಬೇಕಾಗಿದೆ. ಇದಕ್ಕಾಗಿ ಒಂದು ವಾರ ಜಿಲ್ಲೆಯಾದ್ಯಂತ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಪ್ರತಿಜ್ಞಾವಿಧಿ ಕಾರ್ಯಕ್ರಮ ಪೂರ್ವದಲ್ಲಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಹಿರೇಮಠ, ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಕೆ.ಗುಡೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Intro:AnchorBody:ಮಕ್ಕಳಲ್ಲಿನ ತಾರತಮ್ಯ ಹೋಗಲಾಡಿಸಿ : ಸಿಇಓ ಮಾನಕರ
ಬಾಗಲಕೋಟೆ-- ಗಂಡು ಮಗು ಹುಟ್ಟಿದಾಗಿನ ಸಂಭ್ರಮ ಹೆಣ್ಣು
ಹುಟ್ಟಿದಾಗಲೂ ಅದೇ ಸಂಭ್ರಮ ಪಡುವ ಮೂಲಕ ಮಕ್ಕಳಲ್ಲಿನ ತಾರತಮ್ಯ ಹೋಗಲಾಡಿಸಬೇಕೆಂದು
ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಹೇಳಿದರು.
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿಂದು ಜಿಲ್ಲಾಡಳಿತ,
ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ
ಇಲಾಖೆ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡ ಬೇಟಿ ಬಚಾವೋ, ಬೇಟಿ ಪಡಾವೋ
ಯೋಜನೆಯಡಿ ಮಗಳನ್ನು ಉಳಿಸಿ, ಮಗಳನ್ನು ಓದಿಸಿ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿಯನ್ನು
ಬೋಧಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಹೆಣ್ಣು ಮತ್ತು ಗಂಡು ಎಂಬ ಲಿಂಗಬೇದ ಮಾಡಬಾರದು. ಹೆಣ್ಣು ಹುಟ್ಟುತ್ತಿದೆ
ಎಂದು ತಿಳಿದರೆ ಸಾಕು ಗರ್ಭದಲ್ಲಿರುವಾಗಲೇ ಅದನ್ನು ತೆಗೆದುಹಾಕುವ ಕೆಲಸ ನಡೆಯುತ್ತಿವೆ. ವೈದ್ಯರು
ಸಹ ಹುಟ್ಟುವ ಮಗು ಯಾವುದೇಂದು ತಿಳಿಸುವುದು ಅಪರಾಧವಾಗಿದ್ದು, ಅಂತಹ ಘಟನೆಗಳು ಕಂಡು
ಬಂದಲ್ಲಿ ಶಿಕ್ಷೆಗೆ ಒಳಪಡಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಲಿಂಗಾನುಪಾತ ಪ್ರತಿ ಸಾವಿರ ಗಂಡು
ಮಕ್ಕಳಿಗೆ 948 ಹೆಣ್ಣು ಮಕ್ಕಳು ಇದ್ದಾರೆ. ದೇಶಕ್ಕೆ ಹೋಲಿಸಿದರೆ ಈ ಸಂಖ್ಯೆ ಬಹಳಷ್ಟು ಕಡಿಮೆ ಇದೆ
ಎಂದರು.
ಲಿಂಗಾನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾದರೆ ಮಹಾಭಾರತದಲ್ಲಿ ದ್ರೋಪತಿಗೆ 5
ಜನ ಗಂಡಂದಿರು ಇರುವ ಹಾಗೇ ಪರಿಸ್ಥಿತಿ ಒದಗಿಬರುತ್ತದೆ. ಈ ಪರಿಸ್ಥಿತಿ ಬರದಂತೆ
ನೋಡಿಕೊಳ್ಳಬೇಕಾದರೆ ಹೆಣ್ಣು ಮಕ್ಕಳನ್ನು ರಕ್ಷಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ
ಹೆಣ್ಣು ಮಕ್ಕಳ ಸಂರಕ್ಷಣೆ ಮತ್ತು ಪೋಷಣೆ ಹಾಗೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ
ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ ಎಂದರು.
ಸಮಾಜದಲ್ಲಿ ಎಲ್ಲ ಬಗೆಯ ಲಿಂಗತಾರತಮ್ಯಗಳನ್ನು ಕೊನೆಗೊಳಿಸಬೇಕು. ಹೆಣ್ಣು ಶಿಸುವಿನ
ಹುಟ್ಟಿಗೆ ಮತ್ತು ಬದುಕಿಗೆ ಮಾರಕವಾಗಿರುವ ಎಲ್ಲ ಅಂಶಗಳನ್ನು ಹೊಡೆದೋಡಿಸಿ, ಹೆಣ್ಣು ಮಗುವಿನ
ಶಿಕ್ಷಣಕ್ಕೆ ಹಾಗೂ ಅವಳಿಗೆ ಲಭಿಸಬೇಕಾದ ಪ್ರೀತಿ, ವಾತ್ಸಲ್ಯ, ಸುರಕ್ಷತೆ ಹಾಗೂ ಪೋಷಣೆ
ದೊರೆಯುವಂತೆ ನೋಡಿಕೊಳ್ಳುವ ಮೂಲಕ ದೇಶದ ಶಕ್ತಿಶಾಲಿ ಹಾಗೂ ಸಮಾನ ಅಧಿಕಾರಗಳನ್ನು
ಹೊಂದಿದ ಪ್ರಜೆಯಾಗುವಂತೆ ರೂಪುಗೊಳಿಸಬೇಕಾಗಿದೆ. ಇದಕ್ಕಾಗಿ ಒಂದು ವಾರ ಜಿಲ್ಲೆಯಾದ್ಯಂತ
ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಪ್ರತಿಜ್ಞಾವಿಧಿ ಕಾರ್ಯಕ್ರಮ ಪೂರ್ವದಲ್ಲಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ
ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಹಿರೇಮಠ, ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಕೆ.ಗುಡೂರ ಸೇರಿದಂತೆ
ಇತರರು ಉಪಸ್ಥಿತರಿದ್ದರು.Conclusion:Etv-Bharat-Bagalkote

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.