ಬಾಗಲಕೋಟೆ : ಜಮಖಂಡಿ ನಗರ ಸೇರಿದಂತೆ ವಿವಿಧ ಪ್ರದೇಶದಲ್ಲಿ ದುಬಾರಿ ಬೆಲೆಯ ಬೈಕ್ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಜಮಖಂಡಿ ಪೊಲೀಸರು ಬಂಧಿಸಿದ್ದಾರೆ.
ಗಣೇಶ ಇಂಗಳಗಿ, ಮಂಜುನಾಥ ಕಾಂಬಳೆ, ನಾಗಪ್ಪ, ರವಿ ಬಂಧಿತ ಆರೋಪಿಗಳು.
ನಗರದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಈ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ತನಿಖೆ ವೇಳೆ 16 ಬೈಕ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೈಕ್ ಕಳೆದುಕೊಂಡವರು ಸೂಕ್ತ ದಾಖಲೆ ತೋರಿಸಿ ತಮ್ಮ ವಾಹನಗಳನ್ನು ತೆಗೆದುಕೊಂಡು ಹೋಗಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲೋಕೇಶ ಜಗಲಸಾರ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಬೈಕ್ ಕಳ್ಳತನವಾಗಿರುವ ಬಗ್ಗೆ ಜಮಖಂಡಿ ಶಹರ ಪೋಲಿಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು.