ETV Bharat / state

ಬೆಳಗಲಿ ಪಟ್ಟಣ ಪಂಚಾಯತ್​​ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ

ನೂತನವಾಗಿ ಆಯ್ಕೆಯಾದ ಬೆಳಗಲಿ ಪಟ್ಟಣ ಪಂಚಾಯತ್​ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸನ್ಮಾನ ಮಾಡಿ ಡಿಸಿಎಂ ಗೋವಿಂದ ಕಾರಜೋಳ ಶುಭ ಕೋರಿದರು.

Belagali town panchayat president-vice-president
ಬೆಳಗಲಿ ಪಟ್ಟಣ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ
author img

By

Published : Nov 3, 2020, 4:18 PM IST

ಬಾಗಲಕೋಟೆ: ಮುಧೋಳ ತಾಲೂಕಿನ ಬೆಳಗಲಿ ಪಟ್ಟಣ ಪಂಚಾಯತ್​ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಡಿಸಿಎಂ ಗೋವಿಂದ ಕಾರಜೊಳ ಅವರ ಕ್ಷೇತ್ರವಾಗಿರುವ ಹಿನ್ನೆಲೆ ಬಿಜೆಪಿ ಪಕ್ಷ ಬಹುಮತ ಪಡೆದುಕೊಂಡಿದ್ದು, 18 ಸದಸ್ಯರನ್ನು ಒಳಗೊಂಡ ಬೆಳಗಲಿ ಪಟ್ಟಣ ಪಂಚಾಯತ್​ನಲ್ಲಿ 10 ಜನ ಬಿಜೆಪಿ ಸದಸ್ಯರಿದ್ದಾರೆ. ಡಿಸಿಎಂ ಗೋವಿಂದ ಕಾರಜೋಳ ಹಾಗೂ ಸಂಸದ ಪಿ.ಸಿ.ಗದ್ದಿಗೌಡರ ಅವರ ನೇತೃತ್ವದಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ.

ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಪುರುಷ ಮೀಸಲಾತಿ ಇದ್ದು, ಸಿದ್ದುಗೌಡ ಪಾಟೀಲ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಎಸ್​​ಸಿ ಮಹಿಳಾ ಮೀಸಲಾತಿ ಇದ್ದ ಹಿನ್ನೆಲೆ ಇಂದ್ರಾ ಚಾಂಬರ್ ಆಯ್ಕೆಯಾದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸನ್ಮಾನ ಮಾಡಿ ಡಿಸಿಎಂ ಗೋವಿಂದ ಕಾರಜೋಳ ಶುಭ ಕೋರಿದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಸಿದ್ದುಗೌಡ ಪಾಟೀಲ ಮಾತನಾಡಿ, ಕುಡಿಯುವ ನೀರು ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು ನೀಡುವುದಾಗಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.