ETV Bharat / state

ಅಕ್ಕಿ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡ್ತಿದ್ದಾರೆ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ - Minister SS Mallikarjuna

ರಾಜ್ಯದಲ್ಲಿ 7 ಲಕ್ಷ ಟನ್​ ಅಕ್ಕಿ ದಾಸ್ತಾನು ಇದೆ. ಆದರೆ ಅದನ್ನು ನಮಗೆ ಕೊಡಲು ತಯಾರಿಲ್ಲ. ಹಾಗಾಗಿ ಅಕ್ಕಿ ಬದಲಿಗೆ ಜನರ ಖಾತೆಗೆ ಹಣವನ್ನು ಹಾಕುತ್ತಿದ್ದೇವೆ ಎಂದು ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಹೇಳಿದ್ದಾರೆ.

bjp-doing-politics-in-annabhagya-minister-ss-mallikarjuna
ಅಕ್ಕಿ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ : ಸಚಿವ ಎಸ್ ಎಸ್ ಮಲ್ಲಿಕಾರ್ಜುನ
author img

By

Published : Jul 1, 2023, 6:55 PM IST

ಅಕ್ಕಿ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ : ಸಚಿವ ಎಸ್ ಎಸ್ ಮಲ್ಲಿಕಾರ್ಜುನ

ಬಾಗಲಕೋಟೆ : ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಬಿಜೆಪಿಯವರಿಗೆ ರಾಜಕೀಯ ಬಿಟ್ಟು ಬೇರೆ ಏನು ಕೆಲಸ ಇದೆ ಎಂದು ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಪ್ರಶ್ನೆ ಮಾಡಿದರು. ನಗರದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವರಿಗೆ ಈಗ ಮಾಡಲು ಬೇರೆ ಏನೂ ಕೆಲಸ ಇಲ್ಲ ಎಂದು ಟೀಕಿಸಿದರು. ಬಿಜೆಪಿ ಪ್ರತಿಭಟನೆ ಮಾಡಲು ನಿರ್ಧರಿಸಿದೆ ಎಂಬ ಪ್ರಶ್ನೆಗೆ ಅವರು ಈ ಉತ್ತರ ನೀಡಿದರು.

’’ಮೊದಲು ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತೇವೆ ಅಂದರು. ಬಳಿಕ ಕೊಡಲ್ಲ ಅಂದರು. ನಿಜವಾಗಿ ಕೇಂದ್ರ ಸರ್ಕಾರ ಅಕ್ಕಿ ಕೊಡಬೇಕಿತ್ತು. ಈ ಹಿಂದೆ ಆಹಾರ ನಿಗಮದವರು ಅಕ್ಕಿ ಕೊಡುವುದಾಗಿ, ಸರ್ಕಾರದ ಪತ್ರಕ್ಕೆ ಉತ್ತರ ಬರೆದಿದ್ದರು. ಬಳಿಕ ಮತ್ತೆರಡು ದಿನ ಕಳೆದು ಅಕ್ಕಿ ಇಲ್ಲ ಎಂದು ಪತ್ರ ಬರೆಯುತ್ತಾರೆ. ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಇದರಲ್ಲಿ ಎರಡು ಮಾತಿಲ್ಲ ಎಂದು ಎಸ್​ ಎಸ್​ ಮಲ್ಲಿಕಾರ್ಜುನ್​ ಹರಿಹಾಯ್ದರು.

ನಮ್ಮ ರಾಜ್ಯದಲ್ಲಿ 7 ಲಕ್ಷ ಟನ್​ ಅಕ್ಕಿ ದಾಸ್ತಾನು ಇದೆ. ಅದನ್ನಾದರೂ ನಮಗೆ ಕೊಡಬಹುದಿತ್ತು. ಆದರೆ, ಅದನ್ನು ಕೊಡಲು ತಯಾರಿಲ್ಲ. ಹಾಗಾಗಿ ಅಕ್ಕಿ ಬದಲಿಗೆ ಜನರ ಖಾತೆಗೆ ಹಣವನ್ನು ಹಾಕುತ್ತಿದ್ದೇವೆ. ಒಟ್ಟು ಜನರಿಗೆ ನೀಡಿರುವ ಭರವಸೆಯನ್ನುಈಡೇರಿಸುತ್ತೇವೆ. ನಾವು ಯಾವೆಲ್ಲ ಗ್ಯಾರಂಟಿಗಳನ್ನು ನೀಡಿದ್ದೇವೆ ಅದನ್ನು ಖಂಡಿತವಾಗಿಯೂ ಈಡೇರಿಸುತ್ತೇವೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ : ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ‌ಮೂರು ಈಡೇರಿದೆ: ದಿನೇಶ್‌ ಗುಂಡೂರಾವ್‌

ತೋಟಗಾರಿಕೆ ವಿಶ್ವವಿದ್ಯಾಲಯದ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮ್ಮ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದೇನೆ. ಅವರು ಈ ಬಗ್ಗೆ ಸೂಕ್ತ ತನಿಖೆ ನಡೆಸುತ್ತಾರೆ. ಯಾವುದಾದರೂ ಅವ್ಯವಹಾರ ನಡೆದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಾಜಿ ಸಚಿವರಾದ ರೇಣುಕಾಚಾರ್ಯ ಬಿಜೆಪಿ ವಿರುದ್ದ ಮಾತನಾಡುತ್ತಿರುವ ಬಗ್ಗೆ ಪ್ರಶ್ನೆ ಮಾಡಿದಾಗ, ಈ ಪ್ರಶ್ನೆಗೆ ಅವರಿಗೆ ಕೇಳಿ,ನನಗೆ ಕೇಳಿದರೆ ಏನು ಹೇಳಬೇಕು ಎಂದು ಮಾಧ್ಯಮದವರನ್ನೇ ಮರು ಪ್ರಶ್ನೆ ಮಾಡಿದರು. ಅವರು, ಯಾವಾಗ ಏನು ಮಾತನಾಡುತ್ತಾರೆ ಏನೂ ಹೇಳುತ್ತಾರೆ ಎಂಬುದು ತಿಳಿಯುವುದಿಲ್ಲ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ನಮ್ಮ ಪಕ್ಷದಲ್ಲಿ ಜಾಗ ಇಲ್ಲ, ಅವರನ್ನು ಕರೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಎಸ್​ ಎಸ್​ ಮಲ್ಲಿಕಾರ್ಜುನ್​ ಸ್ಪಷ್ಟಪಡಿಸಿದರು.

ಇದನ್ನೂ ಓದಿ : ಕಾಂಗ್ರೆಸ್​ನ ಘೋಷಿತ ಎಲ್ಲಾ ಯೋಜನೆಗಳು ಜಾರಿಗೆ ಬರಲಿದೆ: ಡಿಸಿಎಂ ಡಿಕೆಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.