ಬಾಗಲಕೋಟೆ: ಡ್ರಗ್ಸ್ ಮಾಫಿಯಾದಲ್ಲಿ ತೊಡಗಿದವರು ಎಷ್ಟೇ ಪ್ರಭಾವಿ ಆಗಿದ್ದರೂ, ಅವರನ್ನು ಪತ್ತೆ ಮಾಡಿ ಕಠಿಣ ಕ್ರಮ ತೆಗೆದುಕೊಂಡು ಶಿಕ್ಷೆ ನೀಡಬೇಕು ಎಂದು ಬಿಜೆಪಿ ಯುವ ಮೊರ್ಚಾದಿಂದ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಲಾಯಿತು.
ಡ್ರಗ್ಸ್ ದಂಧೆ ಮಟ್ಟ ಹಾಕುವಲ್ಲಿ ಪೊಲೀಸ್ ಇಲಾಖೆ ಹಾಗೂ ಸರ್ಕಾರದ ಬದ್ಧತೆ ಪ್ರಶಂಸನೀಯವಾಗಿದ್ದು, ಈ ಹಿನ್ನೆಲೆ ಆರೋಪಿಗಳು ಎಷ್ಟೇ ಪ್ರಭಾವಿ ಇದ್ದರೂ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಶಾಸಕ ವೀರಣ್ಣ ಚರಂತಿಮಠ ಹಾಗೂ ಯುವ ಮೊರ್ಚಾ ಘಟಕದ ಜಿಲ್ಲಾಧ್ಯಕ್ಷರಾದ ಆನಂದ ಇಂಗಳಗಾವಿ ಸೇರಿದಂತೆ ಇತರ ಮುಖಂಡರು ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.