ETV Bharat / state

ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಕೇಂದ್ರದ ತಂಡ ಭೇಟಿ - central govt team visit to flood area

ಬಾಗಲಕೋಟೆ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಉಂಟಾದ ಹಾನಿ ಪ್ರಮಾಣ ಹಾಗೂ ಸಮಸ್ಯೆಗಳನ್ನು ಪರಿಶೀಲಿಸಲು ಕೇಂದ್ರದ ತಂಡ ಜಿಲ್ಲೆಗೆ ಆಗಮಿಸಿದ್ದು, ಜಿಲ್ಲೆಯ ವಿವಿಧ ಕಡೆ ಭೇಟಿ ನೀಡಿದೆ.

Center team visit to flood area in bagalakote
ಪ್ರವಾಹ ಪೀಡಿತ ಪ್ರದೇಶಕ್ಕೆ ಕೇಂದ್ರದ ತಂಡ ಭೇಟಿ
author img

By

Published : Sep 8, 2020, 11:47 PM IST

ಬಾಗಲಕೋಟೆ: ಜಿಲ್ಲೆಯ ವಿವಿಧ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡವು ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಮೊದಲು ಬದಾಮಿ ಗೋವನಕೊಪ್ಪ ಗ್ರಾಮದ ಬಳಿಯ ಮಲಪ್ರಭಾ ನದಿಯ ಸೇತುವೆ ವೀಕ್ಷಣೆ ಮಾಡಿ, ಪರಿಶೀಲಿಸಲಾಯಿತು.

ಬೆಂಗಳೂರಿನ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಪ್ರಾದೇಶಿಕ ಕಚೇರಿಯ ಅಧೀಕ್ಷಕ ಎಂಜಿನಿಯರ್ ಸದಾನಂದ ಬಾಬು ಹಾಗೂ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ವಿ.ಪಿ.ರಾಜವೇದಿ ಒಳಗೊಂಡ ಅಧಿಕಾರಿಗಳ ತಂಡವು ಗದಗ ಜಿಲ್ಲೆಯ ಪ್ರವಾಹ ಹಾನಿ ವೀಕ್ಷಣೆ ನಂತರ ಜಿಲ್ಲೆಗೆ ಆಗಮಿಸಿತ್ತು. ಕೊಣ್ಣೂರ ಸೇತುವೆ ಬಳಿ ನಿಂತು ಮಲಪ್ರಭಾ ನದಿಯ ಹರಿಯುವ ನೀರಿನ ಪ್ರಮಾಣ ಹಾಗೂ ಬೆಳೆಗಳಿಗೆ ಹಾನಿಯ ಬಗ್ಗೆ ಈ ವೇಳೆ ವೀಕ್ಷಣೆ ಮಾಡಲಾಯಿತು.

ಪ್ರವಾಹ ಪೀಡಿತ ಪ್ರದೇಶಕ್ಕೆ ಕೇಂದ್ರದ ತಂಡ ಭೇಟಿ

ನಂತರ ಗೋವನಕೊಪ್ಪ ಗ್ರಾಮದಲ್ಲಿ ಹಳೆಯ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದನ್ನು ಪರಿಶೀಲಿಸಿದರು. ಈ ಸ್ಥಳದಲ್ಲಿ ಬೆಳೆ ಹಾನಿ ಆಗಿರುವ ಬಗ್ಗೆ ಮಾಹಿತಿ ಪಡೆದು ನಂತರ, ಹೆಬ್ಬಳ್ಳಿ ಗ್ರಾಮದಲ್ಲಿ ಬೆಳೆ ಹಾನಿ ವೀಕ್ಷಣೆ ನಡೆಸಿದರು. ನಂತರ ಬಾದಾಮಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ರಾಜೇಂದ್ರ ಮಾತನಾಡಿ, ಜಿಲ್ಲೆಯಲ್ಲಿ 857 ಕೋಟಿ ಪ್ರವಾಹ ದಿಂದ ಹಾನಿ ಆಗಿದ್ದು, ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿ ಬಗ್ಗೆ ಸಮಗ್ರ ಮಾಹಿತಿ ನೀಡಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.