ETV Bharat / state

ವಸ್ತುಗಳ ಖರೀದಿ ಮುನ್ನ ಗುಣಮಟ್ಟ ಪರಿಶೀಲಿಸಿ: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಸಲಹೆ - ಡಾ.ಬಿ.ಆರ್.ಅಂಬೇಡ್ಕರ್​ ಭವನ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಬಾಗಲಕೋಟೆ ಸುದ್ದಿ

ಜಾಹೀರಾತುಗಳಿಗೆ ಮಾರುಹೋಗದೇ ವಸ್ತುಗಳನ್ನು ಗುಣಮಟ್ಟ ಪರಿಶೀಲಿಸಿ ಖರೀದಿಸುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ ತಿಳಿಸಿದರು.

bagalkot
ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ
author img

By

Published : Dec 25, 2019, 9:40 AM IST

ಬಾಗಲಕೋಟೆ: ಜಾಹೀರಾತುಗಳಿಗೆ ಮಾರು ಹೋಗದೇ ವಸ್ತುಗಳನ್ನು ಗುಣಮಟ್ಟ ಪರಿಶೀಲಿಸಿ ಖರೀದಿಸುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಸಲಹೆ ನೀಡಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ್​ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಹಕರಿಲ್ಲದೇ ವರ್ತಕರಿಗೆ ವ್ಯವಹಾರ ಮಾಡಲು ಸಾಧ್ಯವಿಲ್ಲ. ಆದರೆ ವರ್ತಕರು ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಿಗೆ ಅನ್ಯಾಯ ಮಾಡುತ್ತಿದ್ದು, ಗ್ರಾಹಕರು ವ್ಯವಹರಿಸುವಾಗ ಎಚ್ಚರಿಕೆಯಿಂದ ಇರಬೇಕು ಎಂದರು.

ಕರಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ಪ್ರಕಾಶ್.ವಿ, ಗ್ರಾಹಕರ ಹಿತರಕ್ಷಣೆಯೇ ನಮ್ಮೆಲ್ಲರ ಹೊಣೆಯಾಗಿದ್ದು, ಮೋಸ ಹೋದಲ್ಲಿ ಕಾನೂನಿನ ಸಲಹೆ ಪಡೆದುಕೊಳ್ಳಬೇಕು. ಗ್ರಾಹಕ ಕಾನೂನು ಕಾಯ್ದೆಯ ಪ್ರಕಾರ, ಗ್ರಾಹಕರಿಗೆ ಉಚಿತ ಕಾನೂನು ನೆರವು ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಶಾರದಾ ಕೆ. ಮಾತನಾಡಿ, ಗ್ರಾಹಕರ ಸಂರಕ್ಷಣೆಗಾಗಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು, ಅವುಗಳ ಪ್ರಯೋಜನಗಳನ್ನು ಗ್ರಾಹಕರು ಪಡೆದುಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ಆದರ್ಶ ವಿದ್ಯಾರ್ಥಿಗಳಿಂದ ಗ್ರಾಹಕ ಕಾನೂನು ಅರಿವು ಕುರಿತು ಕಿರು ನಾಟಕ ಪ್ರದರ್ಶನ ನಡೆಯಿತು. ರಾಷ್ಟ್ರೀಯ ಗ್ರಾಹಕ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನವನ್ನು ಸಹ ವಿತರಿಸಲಾಯಿತು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ ಪೂಜಾರಿ, ಕುಟುಂಬ ಕಲ್ಯಾಣಾಧಿಕಾರಿ ಡಿ.ಬಿ.ಪಟ್ಟಣಶೆಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Intro:AnchorBody:ವಸ್ತುಗಳ ಖರೀದಿ ಮುನ್ನ ಗುಣಮಟ್ಟ ಪರಿಶೀಲಿಸಿ : ಡಿಸಿ ಡಾ.ರಾಜೇಂದ್ರ

ಬಾಗಲಕೋಟೆ: ಜಾಹೀರಾತುಗಳಿಗೆ ಮಾರು ಹೋಗದೇ
ವಸ್ತುಗಳನ್ನು ಖರೀದಿಸುವ ಮುನ್ನ ಗುಣಮಟ್ಟ ಪರಿಶೀಲಿಸಿ ಖರೀದಿಸುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್
ಡಾ.ಕೆ.ರಾಜೇಂದ್ರ ತಿಳಿಸಿದರು.
ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ
ಇಲಾಖೆ, ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಇತರೆ
ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು
ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಹಕರಿಲ್ಲದೇ ವರ್ತಕರಿಗೆ ವ್ಯವಹಾರ ಮಾಡಲು ಸಾಧ್ಯವಿಲ್ಲ. ಆದರೆ ವರ್ತಕರು ಒಂದಲ್ಲ
ಒಂದು ರೀತಿಯಲ್ಲಿ ಗ್ರಾಹಕರಿಗೆ ಅನ್ಯಾಯ ಮಾಡುತ್ತಿದ್ದು, ಗ್ರಾಹಕರು ವ್ಯವಹರಿಸುವಾಗ ಎಚ್ಚರಿಕೆಯಿಂದ
ಇರಬೇಕು. ಅನ್ಯಾಯವಾದಲ್ಲಿ ತಕ್ಷಣ ಜಿಲ್ಲಾ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಿ ಪರಿಹಾರ
ಕಂಡುಕೊಳ್ಳಬಹುದಾಗಿದೆ. ಇದರಿಂದ ವರ್ತಕರಿಗೂ ಕೂಡಾ ಎಚ್ಚರಿಕೆ ನೀಡಿದಂತಾಗುತ್ತದೆ. ಇಲ್ಲದಿದ್ದರೆ
ಪದೇ ಪದೇ ಗ್ರಾಹಕರಿಗೆ ಮೋಸ ಮಾಡುತ್ತಾ ಇರುತ್ತಾರೆ ಎಂದರು.
ಕರಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನ ಹಿರಿಯ ದಿವಾಣಿ ನ್ಯಾಯಾ
ಧೀಶರಾದ ಪ್ರಕಾಶ ವಿ. ಅವರು ಗ್ರಾಹಕರ ಹಿತರಕ್ಷಣೆಯೇ ನಮ್ಮೆಲ್ಲರ ಹೊಣೆಯಾಗಿದ್ದು, ಮೋಸ
ಹೋದಲ್ಲಿ ಕಾನೂನಿನ ಸಲಹೆ ಪಡೆದುಕೊಳ್ಳಬೇಕು. ಗ್ರಾಹಕ ಕಾನೂನು ಕಾಯ್ದೆಯ ಪ್ರಕಾರ ಗ್ರಾಹಕರಿಗೆ
ಉಚಿತ ಕಾನೂನು ನೆರವು ನೀಡಲಾಗುತ್ತಿದೆ. ಗ್ರಾಹಕರಿಗೆ ಇನ್ನಷ್ಟು ಅನುಕೂಲವಾಗುವ ನಿಟ್ಟಿನಲ್ಲಿ
ಜಿಲ್ಲೆಯಲ್ಲಿ ಗ್ರಾಹಕ ಸಹಾಯವಾಣಿಯೊಂದನ್ನು ಆರಂಭಿಸಲು ಜಿಲ್ಲಾಧಿಕಾರಿಗಳು ಅನುಮತಿ ನೀಡಲು
ಕೋರಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಶಾರದಾ ಕೆ.
ಮಾತನಾಡಿ ಗ್ರಾಹಕರು ಇಂದು ತಂತ್ರಜ್ಞಾನದ ಯುಗದಲ್ಲಿ ಸಿಲುಕಿದ್ದು, ಗ್ರಾಹಕರು ಯಾವುದಾದರೂ
ಒಂದು ರೀತಿಯಲ್ಲಿ ಮೋಸ ಹೋಗುತ್ತಿದ್ದಾರೆ. ಗ್ರಾಹಕರ ಸಂರಕ್ಷಣೆಗಾಗಿ ಕಾಯ್ದೆಗಳನ್ನು ಜಾರಿಗೆ ತಂ
ದಿದ್ದು. ಅವುಗಳ ಪ್ರಯೋಜನಗಳನ್ನು ಗ್ರಾಹಕರು ಪಡೆದುಕೊಳ್ಳಬೇಕು. ಆಧುನಿಕ ಸಮಾಜದಲ್ಲಿ
ಜಾಹಿರಾತುಗಳು ಗ್ರಾಹಕರನ್ನು ವಿವಿಧ ದೃಷ್ಠಿಯಿಂದ ಸೆಳೆಯುತ್ತವೆ. ಗ್ರಾಹಕರು ಮೋಸಹೋಗದಂತೆ
ಗ್ರಾಹಕರ ಹಕ್ಕುಗಳ ಸಂರಕ್ಷಣೆಗಾಗಿ 1986 ರಲ್ಲಿ ಜಾರಿಯಾದ ಗ್ರಾಹಕರ ಹಿತರಕ್ಷಣಾ ಕಾಯ್ದೆಯ
ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ನ್ಯಾಯವಾದಿ ಬಿ.ಕೆ.ಪಾಟೀಲ ಮಾತನಾಡಿ ಡಿಸೆಂಬರ್
24, 1986 ರಂದು ಆರಂಭವಾದ ಈ ಕಾಯ್ದೆ ಪ್ರತಿ ಜಿಲ್ಲೆಯಲ್ಲಿಯೂ ಒಂದೊಂದು ಶಾಖೆಯನ್ನು
ತೆರೆಯುವ ಮೂಲಕ ಗ್ರಾಹಕನಿಗೆ ಆಗುತ್ತಿರುವ ಮೋಸಕ್ಕೆ ನ್ಯಾಯ ಒದಗಿಸಲಾಗುತ್ತಿದೆ ಎಂದರು. ಇಂದಿ
ನ ವ್ಯವಸ್ಥೆಯಲ್ಲಿ ಒಬ್ಬರನ್ನು ಒಬ್ಬರು ನೋಡದೇ ವ್ಯವಹರಿಸುತ್ತಿದ್ದಾರೆ. ಅವರು ಮಾಡುವ ಮೋಸ,
ವಂಚನೆ ಗೊತ್ತಾಗುವುದಿಲ್ಲ. ಇದರಿಂದ ಅನೇಕ ಪೇಕ್ ಕಂಪನಿಗಳು ಗ್ರಾಹಕರಿಗೆ ಮೋಸ ಮಾಡುತ್ತಾ
ಇವೆ. ಈ ವ್ಯವಸ್ಥೆಯಿಂದ ಕೆಲವೊಂದು ಅನುಕೂಲಕರವಾಗಿದ್ದರೆ, ಇನ್ನು ಕೆಲವು ದೋಷಪೂರಿತದಿಂದ
ಕೂಡಿದವುಗಳಾಗಿರುತ್ತವೆ. ಗ್ರಾಹರಕು ಎಚ್ಚರಿಕೆಯಿಂದ ವಸ್ತುಗಳನ್ನು ಖರೀದಿಸಲಬೇಕೆಂದು ತಿಳಿಸಿದರು.
ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿಗಳಿಂದ ಗ್ರಾಹಕ ಕಾನೂನು ಅರಿವು
ಕುರಿತು ಕಿರು ನಾಟಕ ಪ್ರದರ್ಶನ ನಡೆಯಿತು. ರಾಷ್ಟ್ರೀಯ ಗ್ರಾಹಕ ದಿನಾಚರಣೆ ಅಂಗವಾಗಿ
ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನವನ್ನು ಸಹ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಶಶಿಧರ ಪೂಜಾರಿ,
ಕುಟುಂಬ ಕಲ್ಯಾಣಾಧಿಕಾರಿ ಡಿ.ಬಿ.ಪಟ್ಟಣಶೆಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು
ಉಪಸ್ಥಿತರಿದ್ದರು. ಕಾರ್ಯಕ್ರಮ ಪೂರ್ವದಲ್ಲಿ ಗ್ರಾಹಕರ ಜಾಗೃತಿಗೆ ಹಮ್ಮಿಕೊಂಡ ವಿವಿಧ
ಪ್ರಾತ್ಯಕ್ಷಿಕೆಗಳನ್ನು ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಖೆಯ ಅಧಿಕಾರಿಗಳು ವೀಕ್ಷಿಸಿದರು.
Conclusion:ETV-Bharat-Bagalkote

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.