ಬಾಗಲಕೋಟೆ: ಯಾವುದೇ ಕಾರಣಕ್ಕೂ ಶಾಸಕ ಉಮೇಶ್ ಕತ್ತಿ ಪಕ್ಷ ತೊರೆಯುವುದಿಲ್ಲ. ಇಂತಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.
ಇಲ್ಲಿನ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಮಠ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ನ ನಾಯಕರೂ ಸಂತ್ರಸ್ತರಾಗಿದ್ದಾರೆ. ಅವರ ಮಾತುಗಳಿಗೆ ಕಿವಿಗೊಡಬೇಡಿ. ಇಂತಹ ನಿರಾಶ್ರಿತರಿಗೆ ಉಮೇಶ ಕತ್ತಿ ನೆರವು
ನೀಡಬಹುದೇನೋ ಎಂದು ಕಾಂಗ್ರೆಸ್ನವರು ಕರೆದಿರಬಹುದು ಎಂದು ವ್ಯಂಗ್ಯವಾಡಿದರು.
ರಾಜ್ಯದ ವಿಪಕ್ಷ ನಾಯಕರನ್ನು, ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಶಕ್ತಿ ಕಾಂಗ್ರೆಸ್ಗೆ ಇಲ್ಲ ಎಂದು ಕುಟುಕಿದರು. ಇದೇ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದಡಿ ಭೋವಿ ಸಮಾಜಕ್ಕೆ ಸಚಿವ ಸ್ಥಾನ ಬೇಕು ಎಂದು ಶ್ರೀಗಳು ಒತ್ತಾಯಿಸಿದರು.