ಬಾಗಲಕೋಟೆ: ತೇರದಾಳ ಮತಕ್ಷೇತ್ರದಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಪ್ರವಾಸ ಹಮ್ಮಿಕೊಂಡಿದ್ದು, ಪ್ರತಿಭಟನೆ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ತೇರದಾಳ ಮತಕ್ಷೇತ್ರದ ಮಹಾಲಿಂಗಪುರ, ರಬಕವಿ-ಬನಹಟ್ಟಿದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಬ್ಯಾನರ್‌ಗಳು ಎಲ್ಲೆಂದರಲ್ಲಿ ಕಾಣಿಸುತ್ತಿದೆ. ಮಾಜಿ ಸಚಿವೆ ಉಮಾಶ್ರೀ ಮತಕ್ಷೇತ್ರದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡು, ಬಿಜೆಪಿ ಪಕ್ಷದ ಶಾಸಕ ಸಿದ್ದು ಸವದಿ, ಇತ್ತೀಚೆಗೆ ಮಹಾಲಿಂಗಪುರ ಪುರಸಭೆ ಚುನಾವಣೆಯಲ್ಲಿ ಮಹಿಳಾ ಸದಸ್ಯರನ್ನು ಎಳೆದಾಡಿನ ಪ್ರಕರಣ ಸೇರಿದಂತೆ ರಾಜ್ಯ ಸರ್ಕಾರ ವಿರುದ್ಧ ಗುಡುಗುವ ನಿರೀಕ್ಷೆಯಿದೆ.
ಇದನ್ನೂ ಓದಿ:ಪುರಸಭೆ ಸದಸ್ಯೆಗೆ ಗರ್ಭಪಾತ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದು ಸವದಿಗೆ ಉಮಾ ಶ್ರೀ ಆಗ್ರಹ
ಮಹಾಲಿಂಗಪುರ,ರಬಕವಿ ಬನಹಟ್ಟಿ ಪಟ್ಟಣದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲು ಬರುವ ಕಾಂಗ್ರೆಸ್ ಪಕ್ಷದ ಮುಖಂಡರುಗಳ ಬ್ಯಾನರ್‌ಗಳು ರಸ್ತೆ ಇಕ್ಕೆಲೆಗಳಲ್ಲಿ ತುಂಬಿದ್ದು, ಜನರಿಗೆ ಕಿರಿಕಿರಿ ಉಂಟಾಗಿದೆ.