ETV Bharat / state

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ - Congress protests

ಅಡುಗೆ ಅನಿಲ, ಡೀಸೆಲ್ ಹಾಗೂ ಪೆಟ್ರೋಲ್​ಗಳ ಬೆಲೆ ಏರಿಕೆಯನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಹಾಗೂ ಬಾಗಲಕೋಟೆ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

Congress protests
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
author img

By

Published : Feb 12, 2021, 7:07 PM IST

ಬಾಗಲಕೋಟೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದು ಅಡುಗೆ ಅನಿಲ, ಡೀಸೆಲ್ ಹಾಗೂ ಪೆಟ್ರೋಲ್ ಬೆಲೆಗಳನ್ನು ಕೂಡಲೇ ಕಡಿಮೆಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಇಂದು ನವನಗರದ ಎಪಿಎಂಸಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಜಿಲ್ಲಾ ಕಾಂಗ್ರೆಸ್ ಹಾಗೂ ಬಾಗಲಕೋಟೆ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದಿನೇ ದಿನೇ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡುತ್ತಿರುವುದನ್ನು ಖಂಡಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ 58 ಡಾಲರ್​ಗೆ ಒಂದು ಬ್ಯಾರಲ್‍ಗೆ ಇದ್ದರೂ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕ್ರಮವಾಗಿ 93 ಹಾಗೂ 84 ರೂ.ಗೆ ಹೆಚ್ಚಳವಾಗಿದೆ. ಗ್ಯಾಸ್ ಸಿಲೆಂಡರ್ 400 ರಿಂದ 850 ಆಗಿದೆ. ದಿನಬಳಕೆಯ ಎಲ್ಲ ಧಾನ್ಯಗಳು, ತರಕಾರಿ ಬೆಲೆಗಳು ಗಗನಕ್ಕೇರಿ ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ ಎಂದರು.

ಓದಿ:ಮೋದಿಯಂಥ ಹೇಡಿ ಪ್ರಧಾನಿಯನ್ನು ದೇಶ ನೋಡಿರಲಿಲ್ಲ: ಶಾಸಕ ಯತೀಂದ್ರ ಸಿದ್ದರಾಮಯ್ಯ

ಮಾಜಿ ಸಚಿವ ಹೆಚ್.ವೈ. ಮೇಟಿ ಮಾತನಾಡಿ, ಎಪಿಎಂಸಿ ಹಾಗೂ ಭೂಹಿಡುವಳಿ ಕಾಯ್ದೆ ತಿದ್ದುಪಡಿ ತಂದು ರೈತರ ಬದುಕಿನೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಟವಾಡುತ್ತಿವೆ. ಅವರು ಕಷ್ಟಪಟ್ಟು ತಿಂಗಳುಗಟ್ಟಲೇ ಬೆಳೆದ ಬೆಳೆಯನ್ನು ಕಾರ್ಪೋರೇಟ್ ಹಾಗೂ ದೊಡ್ಡ ವ್ಯಾಪಾರಿಗಳಿಗೆ ಕೊಡುವ ಅನಿವಾರ್ಯತೆಗೆ ಈ ಕಾನೂನು ನೂಕುತ್ತಿದೆ. ಭೂಹಿಡುವಳಿ ಕಾನೂನಿನ ತಿದ್ದುಪಡಿಯಿಂದ ಸಣ್ಣ ಮತ್ತು ಅತೀ ಸಣ್ಣ ರೈತರು ತಮ್ಮ ಭೂಮಿಯನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.