ಬಾಗಲಕೋಟೆ: ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ನಗರದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಎಸ್.ಆರ್.ಪಾಟೀಲ್ ಮಾತನಾಡಿ, ಉತ್ತರ ಪ್ರದೇಶದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ರಾಮ ರಾಜ್ಯದಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯ ಇಲ್ಲ.
ಇಂತಹ ಮುಖ್ಯಮಂತ್ರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಬಿಜೆಪಿ ಪಕ್ಷದ ಆಡಳಿತದಲ್ಲಿ ರಾಮ ರಾಜ್ಯ ಆಗದೆ ರಾಕ್ಷಸ ರಾಜ್ಯ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.