ETV Bharat / state

ಶಾಸಕ ಸಿದ್ದು ಸವದಿ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ - ಶಾಸಕ ಸಿದ್ದು ಸವದಿ ವಿರುದ್ಧ ಪ್ರತಿಭಟನೆ

ಬಿಜೆಪಿ ಪಕ್ಷದವರು ಬೇಟಿ ಬಚಾವೋ, ಬೇಟಿ ಪಡಾವೋ‌ ಎಂದು ಯೋಜನೆ ರೂಪಿಸುತ್ತಾರೆ. ಆದರೆ ಅದೇ ಪಕ್ಷದವರು ಈ ರೀತಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸುತ್ತಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

protest
protest
author img

By

Published : Nov 12, 2020, 6:56 PM IST

ಬಾಗಲಕೋಟೆ: ಮಹಾಲಿಂಗಪುರ ಚುನಾವಣೆ ಸಮಯದಲ್ಲಿ ಶಾಸಕ ಸಿದ್ದು ಸವದಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ನಡೆಸಿದ್ದಾರೆ ಎಂದು ಘಟನೆ ಖಂಡಿಸಿ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮಹಿಳಾ ಘಟಕ

ಬಿಜೆಪಿ ಪಕ್ಷದವರು ಬೇಟಿ ಬಚಾವೋ, ಬೇಟಿ ಪಡಾವೋ‌ ಎಂದು ಯೋಜನೆ ರೂಪಿಸಿತ್ತಾರೆ. ಆದರೆ ಅದೇ ಪಕ್ಷದವರು ಈ ರೀತಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸುತ್ತಾರೆ. ಈ ಹಿನ್ನೆಲೆ ಗರ್ಭಿಣಿಯಾಗಿದ್ದ ಮಹಿಳೆ ಜೊತೆ ಶಾಸಕರು ಅಸಭ್ಯವಾಗಿ ವರ್ತಿಸಿ, ದೌರ್ಜನ್ಯ ಎಸಗಿದ್ದಾರೆ. ಇಡೀ ಘಟನೆ ಬಗ್ಗೆ ತನಿಖೆ ನಡೆಸಿ, ಶಾಸಕರ ಮೇಲೆ ಎಫ್​ಐಆರ್ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ನಂತರ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾದ ರಕ್ಷಿತಾ ಈಟಿ ಮಾತನಾಡಿ, ಶಾಸಕರ ಮೇಲೆ ಎಫ್​ಐಆರ್ ದಾಖಲಿಸಬೇಕು. ಇಲ್ಲವಾದಲ್ಲಿ ಉಗ್ರ ಸ್ವರೂಪದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.