ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರವಾಗಿರುವ ಬಾದಾಮಿ ಮತಕ್ಷೇತ್ರದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯನವರ ಆಪ್ತರಾಗಿರುವ ಹೊಳೆಬಸು ಶೆಟ್ಟರ್ ನೇತೃತ್ವದಲ್ಲಿ ಮುಖಂಡರು ಮಾಹಿತಿ ನೀಡಿದ್ದಾರೆ. ಕೊರೊನಾ ಎರಡನೇ ಅಲೆ ಭಯ ಹುಟ್ಟಿಸಿದೆ. ಸಾರ್ವಜನಿಕರು ವಿನಾ ಕಾರಣ ಸಂಚಾರ ಮಾಡಬೇಡಿ. ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳಿ, ಸ್ವಚ್ಛತೆ ಕಾಪಾಡಿಕೊಳ್ಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ತಾಲೂಕು ಆರೋಗ್ಯ ಅಧಿಕಾರಿ, ತಹಶೀಲ್ದಾರ್ ಸೇರಿದಂತೆ ಬಾದಾಮಿ ಮತಕ್ಷೇತ್ರದಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.