ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್-19ಗೆ ಮತ್ತೋರ್ವ ಬಲಿಯಾಗಿದ್ದು, ಪಿ-10165 ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ.
ಬನಹಟ್ಟಿಯ ಲಕ್ಷ್ಮೀ ನಗರದ 65 ವರ್ಷದ ವೃದ್ಧ ಕೊರೊನಾದಿಂದ ಮೃತಪಟ್ಟಿದ್ದಾರೆ. ಇವರಿಗೆ ಪಿ-9151 ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ ಜೂನ್ 24ರಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿ ಕಿಡ್ನಿ, ಹೃದಯ, ಬಿಪಿ ಕಾಯಿಲೆಯ ತೊಂದರೆಗೆ ಒಳಗಾಗಿದ್ದರು. ಮೃತನ ಅಂತ್ಯ ಸಂಸ್ಕಾರ ಕೋವಿಡ್ ನಿಯಮಾವಳಿ ಪ್ರಕಾರ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿದೆ.