ಬಾಗಲಕೋಟೆ: ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಕೊರೊನಾ ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಸೋಂಕಿತರಿದ್ದ ಪ್ರದೇಶಕ್ಕೆ ಭೇಟಿ ನೀಡಿ ಸೋಂಕಿತರಿದ್ದ ಓಣಿಯನ್ನು ಸಿಲ್‌ಡೌನ್ ಮಾಡಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಕೊರೊನಾ ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅವರಿಗೆ ನೆಗಡಿ, ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಮಖಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆ ವೇಳೆ ಕೊರೊನಾ ಗುಣಲಕ್ಷಣ ಗೋಚರಿಸಿದ್ದು ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಜು.15ರಂದು ಬಂದ ಪರೀಕ್ಷಾ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿರುವ 8 ಜನರನ್ನು ಹೋಂ ಕ್ವಾರಂಟೈನಲ್ಲಿರಲು ಸೂಚಿಸಿದ್ದು, ಎಲ್ಲರನ್ನೂ ಡಾ. ಪ್ರಕಾಶ ಹುಗ್ಗಿ ನೇತೃತ್ವದ ತಂಡ ಸ್ಕ್ರೀನಿಂಗ್ ನಡೆಸಿದೆ. ಇನ್ನು, ದ್ವಿತೀಯ ಸಂಪರ್ಕದಲ್ಲಿದ್ದ 50 ಜನರನ್ನು ಕೂಡಾ ತಪಾಸಣೆ ನಡೆಸಿದರು. ಕೆಮ್ಮು, ಜ್ವರ, ನೆಗಡಿ ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಬೇಕೆಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.