ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 60 ಕೊರೊನಾ ಪ್ರಕರಣಗಳು ದೃಢವಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 689ಕ್ಕೆ ಏರಿಕೆಯಾಗಿದೆ. ಬಾಗಲಕೋಟೆ ತಾಲೂಕಿನಲ್ಲಿ 17, ಜಮಖಂಡಿ 11, ಬಾದಾಮಿ 12, ಹುನಗುಂದ 12, ಬೀಳಗಿ 3 ಹಾಗೂ ಮುಧೋಳದಲ್ಲಿ 5 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಹೊಸದಾಗಿ ದೃಢಪಟ್ಟ ಸೋಂಕಿತರನ್ನು ನಿಗದಿತ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಿಂದ ಕಳುಹಿಸಲಾಗಿದ್ದ 2,865 ಸ್ಯಾಂಪಲ್‍ಗಳ ವರದಿ ನಿರೀಕ್ಷಿಸಲಾಗುತ್ತಿದೆ.
ಈ ಮಧ್ಯೆ ಕೋವಿಡ್-19ನಿಂದ ಮತ್ತೆ 79 ಮಂದಿ ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ಗುಣಮುಖರಾದವರ ಸಂಖ್ಯೆ 343ಕ್ಕೆ ಏರಿಕೆಯಾಗಿದೆ.
ಕೊರೊನಾದಿಂದ ಗುಣಮುಖರಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಎರಡು ದಿನದಲ್ಲಿ ಒಟ್ಟು 79 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಜುಲೈ 18ರಂದು 24 ಮತ್ತು 19ರಂದು 55 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಗುಣಮುಖರಾದವರಿಗೆ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಪ್ರಕಾಶ್ ಬಿರಾದಾರ ಪ್ರಮಾಣಪತ್ರ ವಿತರಣೆ ಮಾಡಿ, ಚಪ್ಪಾಳೆ ತಟ್ಟಿ ಬೀಳ್ಕೊಟ್ಟಿದ್ದಾರೆ. ಈ ವೇಳೆ ಗುಣಮುಖರಾದವರ ಕೈಗಳಿಗೆ ಸೀಲ್ ಹಾಕಲಾಗಿದೆ.