ಬಾಗಲಕೋಟೆ: ಜಿಲ್ಲೆಯ ನವನಗರ ತೋಟಗಾರಿಕೆ ವಿಶ್ವವಿದ್ಯಾಲಯದ ಬಳಿರುವ ಹೋಟೆಲೊಂದರಲ್ಲಿ ಕ್ವಾರಂಟೈನ್ ಆಗಿದ್ದ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ವಿಶ್ವವಿದ್ಯಾಲಯ ಸಿಬ್ಬಂದಿ ಹೋಟೆಲ್ಗೆ ಹೋಗದಂತೆ ಆಡಳಿತ ಮಂಡಳಿ ಸೂಚನೆ ನೀಡಿದೆ.
ಈ ಹೋಟೆಲ್ಗೆ ಮಹಾರಾಷ್ಟ್ರದಿಂದ ಬಂದ ಮೂವರು, ತಮ್ಮ ಸ್ವಂತ ವೆಚ್ಚದಲ್ಲಿ ಕ್ವಾರಂಟೈನ್ ಆಗಿದ್ದರು. ಇವರಿಗೆ ಇದೀಗ ಕೊರೊನಾ ಪಾಸಿಟಿವ್ ಬಂದಿರುವುದಾಗಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ಅನಿಲ ದೇಸಾಯಿ ಸ್ಪಷ್ಟಪಡಿಸಿದ್ದಾರೆ.
ಇದು ತೋಟಗಾರಿಕೆ ವಿಶ್ವವಿದ್ಯಾಲಯ ಸಿಬ್ಬಂದಿ ಹಾಗೂ ಸೀಮಿಕೇರಿ ಕ್ರಾಸ್ ಜನರ ಆತಂಕಕ್ಕೆ ಕಾರಣವಾಗಿದೆ.