ಬಾಗಲಕೋಟೆ: ನಿತ್ಯ ಮಾರುಕಟ್ಟೆ ಬಂದ್ ಮಾಡಿಸಿ, ಗುಂಪು ಸೇರಿದಂತೆ ನೋಡಿಕೊಳ್ಳುತ್ತಿದ್ದ ಪೊಲೀಸ್ ಸಿಬ್ಬಂದಿಗೂ ಕೊರೊನಾ ಮಹಾಮಾರಿ ಆಕ್ರಮಿಸಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 109 ಜನ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಸಾರ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಡು 1,447 ಸಿಬ್ಬಂದಿ ಇದ್ದು, ಇದರಲ್ಲಿ ಕೆಲಸ ನಿರ್ವಹಿಸುತ್ತಿದ್ದ 109 ಜನ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಇದರಲ್ಲಿ 76 ಜನ ಕ್ವಾರಂಟೈನ್ನಲ್ಲಿ ಇದ್ದಾರೆ. 29 ಜನ ಗುಣಮುಖ ರಾಗಿ ವಾಪಸ್ ಕೆಲಸಕ್ಕೆ ಹಾಜರಾಗಿದ್ದಾರೆ. ನಾಲ್ವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದರೆ, ಮೂವರು ಕೋವಿಡ್ ದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಪೊಲೀಸ್ ಕಲ್ಯಾಣಾಧಿಕಾರಿ ಹಾಗೂ ಇತರ ಮೇಲಿನ ಅಧಿಕಾರಿಗಳ ಮೂಲಕ ಪೊಲೀಸ್ ಸಿಬ್ಬಂದಿಗಳ ಬಗ್ಗೆ ಮಾಹಿತಿ ಕೇಳುತ್ತಾ, ಆರೋಗ್ಯದ ಬಗ್ಗೆ ವಿಚಾರಿಸುತ್ತಾ ಇರುತ್ತವೆ ಎಂದು ಹೇಳಿದರು.