ಬಾಗಲಕೋಟೆ:ಜಿಲ್ಲೆಯಲ್ಲಿ 107 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ
ಹೊಸದಾಗಿ 46 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣ ಭಾನುವಾರದಂದು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9867 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 8648 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಸೋಂಕು ಕಾಣಿಸಿಕೊಂಡವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 3, ಬಾದಾಮಿ 1, ಹುನಗುಂದ 24, ಬೀಳಗಿ 1, ಮುಧೋಳ 9, ಜಮಖಂಡಿ 8 ಜನ ಸೇರಿದ್ದಾರೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1525 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 98261 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 86362 ನೆಗೆಟಿವ್ ಪ್ರಕರಣ, 9867 ಪಾಸಿಟಿವ್ ಪ್ರಕರಣ ಹಾಗೂ 105 ಮೃತ ಪ್ರಕರಣ ವರದಿಯಾಗಿವೆ. ಇನ್ನು 1114 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿವೆ. ಕಂಟೈನ್ಮೆಂಟ್ ಝೋನ್ 722 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.