ETV Bharat / state

ರಾಜಾರೋಷವಾಗಿ ಮನೆಗಳಿಗೆ ನುಗ್ಗುವ ಕಳ್ಳರು; ಬೀಗ ಹಾಕಿದ ಮನೆಗಳೇ ಇವರ ಟಾರ್ಗೆಟ್​- ಸಿಸಿಟಿವಿ ದೃಶ್ಯ

author img

By

Published : Jul 17, 2023, 8:15 AM IST

Updated : Jul 17, 2023, 11:05 AM IST

ಬಾಗಲಕೋಟೆ ಜಿಲ್ಲೆಯಲ್ಲಿ ಕಳ್ಳರು ಬೀಗ ಹಾಕಿದ್ದ ಮನೆಗಳಿಗೆ ನುಗ್ಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Scene of thieves caught on CCTV
ಸಿಸಿ ಟಿವಿಯಲ್ಲಿ ಸೆರೆಯಾದ ಕಳ್ಳರ ದೃಶ್ಯ
ಮನೆಗೆ ನುಗ್ಗುತ್ತಿರುವ ಕಳ್ಳರು- ಸಿಸಿಟಿವಿ ದೃಶ್ಯ

ಬಾಗಲಕೋಟೆ: ಜಿಲ್ಲೆಯ ರಬಕವಿ-ಬನಹಟ್ಟಿ ನಗರದ ವಿದ್ಯಾನಗರ ಬಡಾವಣೆಯ ವಿವಿಧೆಡೆ ಸರಣಿ ಮನೆಗಳ್ಳತನ ಪ್ರಕರಣಗಳು ನಡೆದಿವೆ. ಕಳ್ಳರು ನಗದು, ಬಂಗಾರ ದೋಚಿ ಪರಾರಿಯಾಗಿದ್ದಾರೆ. ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಬಕವಿಯ ವಿದ್ಯಾನಗರದ 8ನೇ ಕ್ರಾಸ್‌ನಲ್ಲಿನ ಚನ್ನಪ್ಪ ಮುಂಡಗನೂರ ಹಾಗು ಚಿದಾನಂದ ಉಪ್ಪಾರ ಎಂಬವರು ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮನೆಯಿಂದ 50 ಸಾವಿರ ನಗದು ಹಾಗು 7.5 ಗ್ರಾಂ ಬಂಗಾರ ಕಳ್ಳತನವಾಗಿದೆ. ಜುಲೈ 13ರ ಗುರುವಾರ ರಾತ್ರಿ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಇಬ್ಬರು ಯುವಕರು ಏಳೆಂಟು ಮನೆಗಳಿಗೆ ನುಗ್ಗಿ ಕೃತ್ಯ ಎಸಗಿದ್ದಾರೆ. ಮುಸುಕು ಧರಿಸಿ, ಮಾರಕಾಸ್ತ್ರಗಳೊಂದಿಗೆ ಮನೆಗಳಿಗೆ ನುಗ್ಗುವುದು, ಬೀಗ ಒಡೆಯುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ತೇರದಾಳ ಪಿಎಸ್‌ಐ ಅಪ್ಪಣ್ಣ ಐಗಳಿ ಸ್ಥಳ ಪರಿಶೀಲನೆ ನಡೆಸಿದರು. ಶ್ವಾನ ದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲನೆ ನಡೆಸಲಾಗಿದೆ. ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದರೆ ಪೊಲೀಸ್ ಠಾಣೆಗೆ ತಿಳಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

"ಸಾರ್ವಜನಿಕರು ಊರಿಗೆ ತೆರಳುವ ವಿಚಾರವನ್ನು ಪೊಲೀಸ್ ಠಾಣೆಯ ಗಮನಕ್ಕೆ ತನ್ನಿ. ಗಲ್ಲಿ ಅಥವಾ ಮನೆಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ ಮಾಡಿದರೆ ಸೂಕ್ತ" ಎಂದು ಬನಹಟ್ಟಿ ಸಿಪಿಐ ಈರಯ್ಯಾ ಮಠಪತಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪೊಲೀಸರ ಸೋಗಿನಲ್ಲಿ ಬಂದು ದರೋಡೆ: ಬೆಂಗಳೂರಿನ ವಿದ್ಯಾರಣ್ಯಪುರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಕೋರರು ಪೊಲೀಸರ ಸೋಗಿನಲ್ಲಿ ಯುವಕರ ಮನೆಗೆ ನುಗ್ಗಿ ಫೋನ್ ಪೇ ಮೂಲಕ 13 ಸಾವಿರ ರೂ. ಹಾಕಿಸಿಕೊಂಡು ಪರಾರಿಯಾಗಿರುವ ಘಟನೆ ಇತ್ತೀಚಿಗೆ ನಡೆದಿತ್ತು. ನಕಲಿ ಪೊಲೀಸರು ಡ್ರಗ್ಸ್ ಸೇವಿಸುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿ ಪರಿಶೀಲನೆ ನೆಪದಲ್ಲಿ ಮನೆಯೊಳಗೆ ಬಂದು, ಹಣ ಮತ್ತು ಚಿನ್ನಾಭರಣ ದೋಚಿದ್ದಾರೆ. ದರೋಡೆಯಾದ ಮನೆಯಲ್ಲಿ ನಾಲ್ವರು ಯುವಕರು ವಾಸಿಸುತ್ತಿದ್ದರು.

ಓರ್ವ ವ್ಯಾಸಂಗ ಮಾಡುತ್ತಿದ್ದರೆ ಉಳಿದ ಮೂವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಜುಲೈ 12ರಂದು ನಾಲ್ವರು ಅಪರಿಚಿತರು ಇವರ ಮನೆಯ ಬಾಗಿಲು ತಟ್ಟಿದ್ದರು. ಬಾಗಿಲು ತೆರೆಯುತ್ತಿದ್ದಂತೆ ಒಳನುಗ್ಗಿದ ಆರೋಪಿಗಳು ತಮ್ಮನ್ನು ಪೊಲೀಸರೆಂದು ಪರಿಚಯಿಸಿಕೊಂಡಿದ್ದರು. ನಿಮ್ಮ ರೂಂನಲ್ಲಿ ನೀವು ಡ್ರಗ್ಸ್ ಸೇವಿಸುವ ಬಗ್ಗೆ ನಮಗೆ ಮಾಹಿತಿ ಬಂದಿದೆ ಎಂದು ಹೇಳಿ ಮನೆಯೆಲ್ಲಾ ಪರಿಶೀಲಿಸಿದ್ದರು.

ಯಾವುದೇ ಬೆಲೆಬಾಳುವ ವಸ್ತುಗಳು ಸಿಗದಿದ್ದಾಗ ಯುವಕರಿಗೆ ಚೂರಿ ತೋರಿಸಿದ ಅಪರಿಚಿತರು, ಅವರ ಕೈಯಲ್ಲಿದ್ದ ಉಂಗುರ, ಕಿವಿಯಲಿದ್ದ ಇಯರ್‌ರಿಂಗ್ ಕಸಿದುಕೊಂಡಿದ್ದರು. ನಂತರ ಫೋನ್ ಪೇನಲ್ಲಿ 13 ಸಾವಿರ ರೂ. ಅನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ಪರಾರಿಯಾಗಿದ್ದಾರೆ. ಯುವಕರು ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಬೆಂಗಳೂರು: ATM ಯಂತ್ರದಿಂದ 24 ಲಕ್ಷ ರೂಪಾಯಿ ದೋಚಿದ್ದ ನಾಲ್ವರು ಆರೋಪಿಗಳ ಬಂಧನ

ಹುಬ್ಬಳ್ಳಿಯಲ್ಲಿ ಸಿಸಿ ಕ್ಯಾಮರಾ ಒಡೆದು ಕಳ್ಳತನಕ್ಕೆ ಯತ್ನಿಸಿದ್ದ ಖದೀಮ: ಜನರ ಕೈಗೆ ಸಿಕ್ಕಿಬಿದ್ದ ಆರೋಪಿ ಪೊಲೀಸರ ವಶಕ್ಕೆ

Last Updated : Jul 17, 2023, 11:05 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.