ETV Bharat / state

ಸೆ.7 ರಿಂದ ಜಂತುಹುಳು ನಾಶಕ ಮಾತ್ರೆ ನುಂಗಿಸುವ ಕಾರ್ಯಕ್ರಮ : ಜಿಲ್ಲಾಧಿಕಾರಿ - Bagalkote latest news

ಸೆ.7 ರಿಂದ 19 ವರೆಗೆ ಸಮುದಾಯ ಆಧಾರಿತ ಜಂತುಹುಳು ಮಾತ್ರೆಗಳನ್ನು ನುಂಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಡಿಸಿ ಸಭೆ
ಡಿಸಿ ಸಭೆ
author img

By

Published : Sep 4, 2020, 10:19 PM IST

ಬಾಗಲಕೋಟೆ: ಸೆ.7 ರಿಂದ 19 ವರೆಗೆ ಸಮುದಾಯ ಆಧಾರಿತ ಜಂತುಹುಳು ಮಾತ್ರೆಗಳನ್ನು ನುಂಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ರಾಷ್ಟ್ರೀಯ ಜಂತುಹುಳು ನಿವಾರಣಾ ಕುರಿತು ಜರುಗಿದ ವಿವಿಧ ಇಲಾಖೆ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, 1 ವರ್ಷದಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಾಶಕ ಅಲ್ಬೆಂಡಾಜೋಲ್ ಮಾತ್ರೆಯನ್ನು ನೀಡಲಾಗುತ್ತಿದ್ದು, ಕೋವಿಡ್ ಭೀತಿಯ ಹಿನ್ನಲೆಯಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಕ್ಕಳಿಗೆ ಮಾತ್ರೆಗಳನ್ನು ನುಂಗಿಸಲಿದ್ದಾರೆ ಎಂದರು.

ಜಿಲ್ಲೆಯಲ್ಲಿನ ಅಂಗನವಾಡಿ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಕಾಲೇಜ ಹಾಗೂ ಕೈಗಾರಿಕೆ ತರಬೇತಿ ಕೇಂದ್ರ, ಡಿಪ್ಲೋಮಾ, ನರ್ಸಿಂಗ್ ಕಾಲೇಜಿನಲ್ಲಿರುವ 1 ರಿಂದ 19 ವರ್ಷದೊಳಗಿನ ಒಟ್ಟು 7.05 ಲಕ್ಷ ಮಕ್ಕಳಿರಬಹುದೆಂದು ಅಂದಾಜಿಸಲಾಗಿದ್ದು, ಈ ಎಲ್ಲಾ ಮಕ್ಕಳಿಗೆ ಜಂತುಹುಳು ನಾಶಕ ನುಂಗಿಸಬೇಕಾಗಿದ್ದು, ಈ ಕಾರ್ಯಕ್ಕೆ ಜಿಲ್ಲೆಯಲ್ಲಿರುವ 1400 ಆಶಾ ಕಾರ್ಯಕರ್ತೆ ಹಾಗೂ 2200 ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರತಿ ಆಶಾ ಅಥವಾ ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ದಿನಕ್ಕೆ 15 ಮನೆಗಳಿಗೆ ತೆರಳಿ ಮನೆಯಲ್ಲಿರುವ ಮಕ್ಕಳನ್ನು ಹೊರಗಡೆ ಕರೆದು ಮಾತ್ರೆಗಳನ್ನು ನುಂಗಿಸಲಿದ್ದಾರೆಂದು ತಿಳಿಸಿದರು.

ಬಳಿಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್. ದೇಸಾಯಿ ಮಾತನಾಡಿ ಜಂತುಹುಳು ಸೋಂಕಿನಿಂದ ಮಕ್ಕಳಲ್ಲಿ ರಕ್ತಹಿನತೆ, ಪೌಷ್ಠಿಕಾಂಶ ಕೊರತೆ, ಹಸಿವುಯಾಗದಿರುವುದು, ನಿಶಕ್ತಿ ಮತ್ತು ಆತಂಕ, ಹೊಟ್ಟೆ ನೋವು, ವಾಕರಿಕೆ, ವಾಂತಿ, ಅತಿಸಾರ ಮತ್ತು ತೂಕ ಕಡಿಮೆಯಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜಂತುಹುಳು ಹೊಂದಿದ ಮಗುವಿನಲ್ಲಿ ಲಕ್ಷಣಗಳು ಹೆಚ್ಚಾಗಿರುತ್ತದೆ. ಕಡಿಮೆ ಪ್ರಮಾಣದ ಸೋಂಕಿನ ಮಕ್ಕಳಲ್ಲಿ ರೋಗಲಕ್ಷಣಗಳು ಹೊಂದಿರುವದಿಲ್ಲ. ಆದ್ದರಿಂದ ಜಂತುಹುಳಿ ನಾಶಕ ಮಾತ್ರೆಯನ್ನು ಕಡ್ಡಾಯವಾಗಿ ನೀಡುವುದು ಅವಶ್ಯವಾಗಿದೆ ಎಂದು ತಿಳಿಸಿದರು.

ಸಮುದಾಯ ಆಧಾರಿತ ಜಂತುಹುಳು ಮಾತ್ರೆಗಳನ್ನು ನುಂಗಿಸುವ ಕಾರ್ಯಕ್ರಮ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಾಕಿಕೊಂಡ ರೂಪುರೇಷೆಗಳ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಭೆಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಪ್ರಚಾರದ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ಪಟ್ಟಣಶೆಟ್ಟಿ, ಮಲೇರಿಯಾ ಡಾ.ಜಯಶ್ರೀ ಎಮ್ಮಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ ಪೂಜಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.