ETV Bharat / state

ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ : ಡಿಸಿ ರಾಜೇಂದ್ರ ಭರವಸೆ - Bagalkote latest news

ಹೆಸರುಕಾಳು ಖರೀದಿ ಸಂಬಂಧ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರು ವಿವಿಧ ಇಲಾಖಾ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

DC meeting
DC meeting
author img

By

Published : Sep 23, 2020, 8:18 PM IST

ಬಾಗಲಕೋಟೆ: ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ಹೆಸರು ಕಾಳು ಉತ್ಪನ್ನಕ್ಕೆ ಪ್ರತಿ ಕ್ವಿಂಟಲ್‍ಗೆ 7,196 ರೂ.ಗಳಂತೆ ಖರೀದಿಸಲಾಗುತ್ತಿದ್ದು, ಸೆ.26 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹೆಸರುಕಾಳು ಉತ್ಪನ್ನವನ್ನು ಪ್ರತಿ ಎಕರೆಗೆ 4 ಕ್ವಿಂಟಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ 4 ಕ್ವಿಂಟಲ್ ಖರೀದಿ ಪ್ರಮಾಣ ನಿಗದಿಪಡಿಸಲಾಗಿದೆ. ಹೆಸರು ಕಾಳು ಖರೀದಿಸಲು ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಎಜೆನ್ಸಿಯಾಗಿ ಹಾಗೂ ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ಸಂಸ್ಥೆಯನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯಾಗಿ ನೇಮಿಸಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಬಾಗಲಕೋಟೆ ತಾಲೂಕಿನ ಪಿ.ಕೆ.ಪಿ.ಎಸ್ ದೇವನಾಳ, ಹುನಗುಂದ ತಾಲೂಕಿನ ಎಫ್.ಪಿ.ಒ ಸುಳಿಭಾವಿ, ಟಿ.ಎ.ಪಿ.ಸಿ.ಎಂ.ಎನ್ ಹುನಗುಂದ, ಬಾದಾಮಿ ಪಿ.ಕೆ.ಪಿ.ಎಸ್, ಬೀಳಗಿ, ಮುಧೋಳ ಹಾಗೂ ಜಮಖಂಡಿ ಟಿ.ಎ.ಪಿ.ಸಿ.ಎಂ.ಎಸ್ ಸೇರಿ ಒಟ್ಟು 6 ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಖರೀದಿ ಕೇಂದ್ರಗಳಲ್ಲಿ ಬೇಕಾದ ಮೂಲ ಸೌಲಭ್ಯಗಳ ವ್ಯವಸ್ಥೆ ಮಾಡಿಕೊಂಡು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಹೆಸರು ಕಳು ಉತ್ಪನ್ನವನ್ನು ಪರೀಕ್ಷಿಸಲು ಸಲುವಾಗಿ ಪ್ರತಿ ಖರೀದಿ ಕೇಂದ್ರಕ್ಕೆ ಒಬ್ಬ ಅನುಭವಿ ಗ್ರೇಡರ್‌ ಅವರನ್ನು ನೇಮಿಸಲು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಲ್ಲಿ ವರ್ತಕರು ತರುವ ಹೆಸರು ಕಾಳು ಉತ್ಪನ್ನವನ್ನು ಖರೀದಿಸಬೇಕು. ಕೇಂದ್ರದಲ್ಲಿ ಯಾವುದೇ ರೀತಿಯ ದುರುಪಯೋಗ ಆಗದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲೂಕಿನ ತಹಶೀಲ್ದಾರರು, ಮೇಲುಸ್ತುವಾರಿಯಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲು ಸೂಚಿಸಿದರು. ಖರೀದಿ ಪ್ರಕ್ರಿಯೆ ಸುಗಮವಾಗಿ ಜರುಗುವಂತೆ ನೋಡಿಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕ ಎಸ್.ವಿ.ಕೊಂಗವಾಡ, ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕೃಷಿ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಎನ್.ಪತ್ತಾರ, ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳಿಯ ಶಾಖಾ ವ್ಯವಸ್ಥಾಪಕ ಸಂದೀಪ ಬಿ.ಜಿ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.