ETV Bharat / state

ಹಾಸ್ಟೆಲ್​ಗಳ ಆಹಾರ ಗುಣಮಟ್ಟ ಬಗ್ಗೆ ವಿದ್ಯಾರ್ಥಿಗಳ ಜೊತೆ ಚರ್ಚಿಸಿದ ಡಿಸಿಎಂ ಕಾರಜೋಳ - DCM In Bagalkot

ಬಾಗಲಕೋಟೆ, ಸರ್ಕಾರಿ ವಸತಿ ನಿಲಯಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಅಲ್ಲಿನ ಆಹಾರದ ಗುಣಮಟ್ಟ ಪರಿಶೀಲಿಸಬೇಕೆಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

dcm-advice
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ
author img

By

Published : Jan 26, 2020, 8:31 PM IST

ಬಾಗಲಕೋಟೆ : ಸರ್ಕಾರಿ ವಸತಿ ನಿಲಯಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಅಲ್ಲಿನ ಆಹಾರದ ಗುಣಮಟ್ಟ ಪರಿಶೀಲಿಸಬೇಕೆಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಸತಿ ನಿಲಯವನ್ನು ಉದ್ಘಾಟನೆ ಮಾಡುವ ಮುಂಚೆ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದಾಗ, ವಿದ್ಯಾರ್ಥಿನಿಯರು, ಗುಣಮಟ್ಟದ ಆಹಾರ ನೀಡುವುದಿಲ್ಲ ಎಂಬ ವಿಚಾರವನ್ನು ಸಚಿವರ ಗಮನಕ್ಕೆ ತಂದಾಗ, ಸಚಿವರು ಜಿಲ್ಲಾ ಪಂಚಾಯತ್​ ಸಿಇಓ ಹಾಗೂ ಜಿಲ್ಲಾಧಿಕಾರಿಗಳಿಗೆ ತಯಾರಾಗಿರುವ ಆಹಾರ ಟೆಸ್ಟ್ ಮಾಡಿ ಎಂದು ಆದೇಶ ನೀಡಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುತ್ತಿದೆ‌‌. ಮುಂದಿನ‌ ಬಜೆಟ್​ನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟರಿಗೆ ಶಿಕ್ಷಣ, ನೀರಾವರಿ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ಶಾಸಕರಾದ ಡಾ. ವೀರಣ್ಣ ಚರಂತಿಮಠ, ಹಣಮಂತ ನಿರಾಣಿ, ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ. ‌ರಾಜೇಂದ್ರ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Intro:AnchorBody:ಬಾಗಲಕೋಟೆ-- ಸರಕಾರಿ ವಸತಿ ನಿಲಯಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ,ಆಹಾರ ಟೆಸ್ಟ್ ಮಾಡಿ ಎಂದು ಉಪ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದ ಘಟನೆ ನವನಗರದ ವಸತಿ ನಿಲಯಗಳ ಉದ್ಘಾಟನಾ ಸಮಾರಂಭಕ್ಕೆ ಹೋದ ಸಮಯದಲ್ಲಿ ಜರುಗಿತು.
ಮುರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಸತಿ ನಿಲಯವನ್ನು ಉದ್ಘಾಟನೆ ಮಾಡುವ ಮುಂಚೆ ವಿದ್ಯಾರ್ಥಿಗಳಿಗೆ ಜೊತೆ ಸಂವಾದ ನಡೆಸುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿ ಯೊರ್ವಳು,ಆಹಾರ ಸರಿಯಾಗಿ ನೀಡುವುದಿಲ್ಲ,ಅರೆ ಬರೆ ಬೆಂದಿರುತ್ತದೆ ಎಂದು ಸಚಿವರ ಗಮನಕ್ಕೆ ತಂದಳು. ಆಗ ಸಚಿವರು ಜಿಲ್ಲಾ ಪಂಚಾಯತ ಸಿಇಓ ಹಾಗೂ ಜಿಲ್ಲಾಧಿಕಾರಿ ಗಳಿಗೆ ಗಮನಕ್ಕೆ ತಂದು ನೀವು ಭೇಟಿ ನೀಡುವ ಸಮಯದಲ್ಲಿ ತಯಾರ ಆಗಿರುವ ಆಹಾರ ಟೆಸ್ಟ್ ಮಾಡಿ ಎಂದರು.ಇದೇ ಸಮಯದಲ್ಲಿ ವಾಡರ್ನ ಯಾರೂ ಇದ್ದರೆ ಅವರ ಮೇಲೆ ಕ್ರಮ ಜರುಗಿಸಿ ಎಂದು ತಿಳಿಸಿದರು. ನಂತರ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದಲ್ಲಿ‌ 824 ವಸತಿ ಶಾಲೆಗಳಿದ್ದು, 450 ವಸತಿ ಶಾಲೆಗಳಿಗೆ ಸ್ತ ಕಟ್ಟಡಗಳಿವೆ. ಈ ವರ್ಷ 8 ವಸತಿ ಶಾಲೆಗಳಿಗೆ ತಲಾ 25 ಕೋಟಿ ರೂ ವೆಚ್ವದಲ್ಲಿ ಕಟ್ಟಡ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ. ಮುಂದಿನ‌ ವರ್ಷ ವಸತಿ‌ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ 1000 ಕೋಟಿ ರೂ‌ ಮೀಸಲಿಡಲಾಗುವುದು. 1000 ವಸತಿ ನಿಲಯಗಳ ಕಟ್ಟಡಗಳನ್ನು ನಿರ್ಮಿಸಲು‌ ಕೇಂದ್ರ ಸರ್ಕಾರವು ಅನುದಾನ ನೀಡಲು ಒಪ್ಪಿದೆ. ಈ‌ ಕುರಿತು ಕೇಂದ್ರ ಸಾಮಾಜಿಕ‌ ನ್ಯಾಯ ಮತ್ತು ಸಬಲೀಕರಣ ಸಚಿವರೊಂದಿಗೆ ಚರ್ಚಿಸಲಾಗಿದ್ದು, ಕೇಂದ್ರ ಸಚಿವರು ಶೀಘ್ರವಾಗಿ‌ ಅನುದಾನ‌ ನೀಡಲು ಒಪ್ಪಿಗೆ ಸೂಚಿಸಿದ್ದಾರೆ‌. ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುತ್ತಿದೆ‌‌. ಮುಂದಿನ‌ ಬಜೆಟ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟರಿಗೆ ಶಿಕ್ಷಣ, ನೀರಾವರಿ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಕ್ಕೆ ಆದ್ಯತೆ ನೀಡಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಪರಿಶಿಷ್ಟರು ಈ ಯೋಜನೆಗಳನ್ನು ‌ಸದ್ಬಳಕೆ ಮಾಡಿಕೊಂಡು ‌ಉನ್ನತ ವ್ಯಾಸಂಗ ಪಡೆದು ಸ್ವಾವಲಂಬಿ ಗಳಾಗಬೇಕು ಎಂದು ಅವರು ಕರೆ ನೀಡಿದರು. ಶಾಸಕರಾದ ಡಾ. ವೀರಣ್ಣ ಚರಂತಿಮಠ, ಹಣಮಂತ ನಿರಾಣಿ ಮಾತನಾಡಿದರು. ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ. ‌ರಾಜೇಂದ್ರ, ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗಂಗೂಬಾಯಿ ಮನಕರ್, ಎಸ್ ಪಿ ಲೋಕೇಶ್ , ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕರ ಸಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.Conclusion:ಈ,ಟಿವಿ,ಬಾಗಲಕೋಟೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.