ಬಾಗಲಕೋಟೆ : ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಮುಧೋಳ ನಗರದ ಜನತಾ ಪ್ಲಾಟ್ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆಯ ಎಸ್‌ಸಿಪಿ ಯೋಜನೆಯಡಿ 2 ಕೋಟಿ ರೂ. ವೆಚ್ಚದಲ್ಲಿ ರುದ್ರಭೂಮಿ, 1 ಕೋಟಿ ರೂ. ವೆಚ್ಚದ ಮಹಾರಾಣಿ ಕೆರೆ ಸಂಪರ್ಕ ರಸ್ತೆ ಹಾಗೂ ಇತರ ರಸ್ತೆಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ವಿವಿಧ ಅಧಿಕಾರಿಗಳು, ಮುಖಂಡರು, ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಸಾಥ್ ನೀಡಿದರು.