ಬಾಗಲಕೋಟೆ: ಕೋವಿಡ್ ರೋಗದ ಹತೋಟಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಬಾಗಲಕೋಟೆ ಹಾಗೂ ಕಲಬುರಗಿ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಮೂಲಕ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಕೇಂದ್ರ ಸರಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಸೌಲಭ್ಯ ಒದಗಿಸಲಾಗಿದೆ. ಪ್ರತಿನಿತ್ಯ 5 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಇದನ್ನು ಇನ್ನೂ ಹೆಚ್ಚಿಗೆ ಮಾಡಲು ಮುಂದಾಗಿದ್ದು, ಲಸಿಕೆ ಪ್ರಮಾಣ ಕಡಿಮೆ ಆಗಿದೆ. ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಬಂದ ನಂತರ ಹತ್ತು ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ತಾಲೂಕು ಮಟ್ಟದಲ್ಲಿ ಸಿಇಓ, ಎಸ್‌ಪಿ ಜೊತೆಗೆ ಹೋಗಿ, ಮಾಸ್ಕ್ ಹಾಕುವಂತೆ, ಸಾಮಾಜಿಕ ಅಂತರ ಪಾಲಿಸುವಂತೆ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಇದೇ ವೇಳೆ ಕಲಬುರಗಿ ಇಎಸ್‌ಐ ಆಸ್ಪತ್ರೆಯನ್ನು ಕೋವಿಡ್ ರೋಗಿಗಳಿಗೆ ಬಳಕೆ ಮಾಡುವಂತೆ ಸೂಚನೆ ನೀಡಿದರು. ಎರಡು ಜಿಲ್ಲೆ ಉಸ್ತುವಾರಿ ಆಗಿರುವುದರಿಂದ ಕಾರಜೋಳ ಅವರು, ಕೋವಿಡ್ ರೋಗ ಹಾಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ. ಏನಾದರೂ ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ : ರಾಜ್ಯದ ರೆಮ್ಡಿಸಿವಿರ್, ಆಕ್ಸಿಜನ್ ಹಂಚಿಕೆ ಹೆಚ್ಚಿಸಿದ ಕೇಂದ್ರ ಸರ್ಕಾರ; ಸಿಎಂ ಹರ್ಷ