ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಬಾಗಲಕೋಟೆ ಜಿಲ್ಲೆಯ 19 ಜನರನ್ನು ಜಿಲ್ಲಾಡಳಿತ ಕ್ವಾರಂಟೈನ್ ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಹಿಸಲು ಕ್ರಮಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.
ಸಾಮೂಹಿಕ ಪ್ರಾರ್ಥನೆಯಲ್ಲಿ ಬಾಗಲಕೋಟೆ ಮೂಲದ 19 ಜನ ಭಾಗವಹಿಸಿದ್ದರು ಎಂದು ಈವರೆಗೆ ವಿವಿಧ ಮೂಲಗಳಿಂದ ಪತ್ತೆ ಹಚ್ಚಲಾಗಿದ್ದು, ನಾಲ್ವರನ್ನು ಬಾಗಲಕೋಟೆ ನಗರದ ವಿವಿಧ ಆಸ್ಪತ್ರೆಗಳ ಕ್ವಾರಂಟೈನ್ನಲ್ಲಿ ಇಡಲಾಗಿದೆ, ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ನಾಲ್ವರು ಕುಟುಂಬ ಸದಸ್ಯರನ್ನು ಅವರವರ ಮನೆಯಲ್ಲೇ ಕ್ವಾರಂಟೈನ್ ನಲ್ಲಿಟ್ಟು ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಉಳಿದ 15 ಜನರನ್ನೂ ಸಹಾ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮನವಿ : ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದವರು ಸ್ವಯಂ ಪ್ರೇರಿತರಾಗಿ ಜಿಲ್ಲಾ ಆಸ್ಪತ್ರೆಗೆ ಬಂದು ತಪಾಸಣೆಗೊಳಗಾಗಬೇಕು ಜಿಲ್ಲಾಡಳಿತವು ನಿರ್ದೇಶನ ನೀಡಿದ್ದು, ಜಿಲ್ಲಾಡಳಿತದ ವತಿಯಿಂದ ಕ್ವಾರಂಟೈನ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತದೆ. ಈ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡವರು ಮುಕ್ತವಾಗಿ ಜಿಲ್ಲಾ ಆಸ್ಪತ್ರೆಗೆ ಬಂದು ತಪಾಸಣೆಗೊಳಗಾಗಬೇಕು ಎಂದು ಮನವಿ ಮಾಡಿದ್ದಾರೆ.