ಬಾಗಲಕೋಟೆ: ವಿದ್ಯುತ್ ಪಂಪ್ಸೆಟ್ ತರಲು ಹೋಗಿ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆಯಾಗಿದೆ.
ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮದ ದೇವೇಂದ್ರ ಮೃತ ಯುವಕ. ದೇವೇಂದ್ರ ವಿದ್ಯುತ್ ಪಂಪ್ಸೆಟ್ ತರಲು ಹೋದಾಗ, ನೀರಿನಲ್ಲಿ ಕೊಚ್ಚಿ ಹೋಗಿದ್ದ. ಕಳೆದ ಎರಡು ದಿನಗಳಿಂದ ಯುವಕನಿಗಾಗಿ ಜಿಲ್ಲಾಡಳಿತದ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಇಂದು ಯುವಕನ ಮೃತ ದೇಹ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಶಾಸಕ ದೊಡ್ಡನಗೌಡ ಪಾಟೀಲ್ ಮೃತ ಯುವಕನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ, ಯುವಕನ ಸಾವಿಗೆ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ: ನೀರು ತುಂಬಿದ ಕಲ್ಲು ಕ್ವಾರಿಯಲ್ಲಿ ಈಜಲು ಹೋದ ಯುವಕ ಸಾವು