ETV Bharat / state

ಬಿಡಿಸಿಸಿ ಬ್ಯಾಂಕ್‍ನಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ - Distribution of incentives to Asha workers

ಬಾಗಲಕೋಟೆಯ ಡಿಸಿಸಿ ಬ್ಯಾಂಕ್​ ವತಿಯಿಂದ ಜಿಲ್ಲೆಯ 667 ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ
ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ
author img

By

Published : May 28, 2020, 11:42 AM IST

ಬಾಗಲಕೋಟೆ: ಜಿಲ್ಲಾ ಸಹಕಾರಿ ಬ್ಯಾಂಕ್ ವತಿಯಿಂದ 667 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ.ಗಳಂತೆ ಪ್ರೋತ್ಸಾಹಧನ ವಿತರಣೆ ಕಾರ್ಯಕ್ಕೆ ಬ್ಯಾಂಕಿನ ನಿರ್ದೇಶಕ ಹಾಗೂ ವಿಧಾನ ಪರಿಷತ್​ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ ಚಾಲನೆ ನೀಡಿದರು.

ನವನಗರದ ಬಿಡಿಸಿಸಿ ಬ್ಯಾಂಕ್ ಮುಖ್ಯ ಕಚೇರಿಯ ಸಭಾಭವನದಲ್ಲಿ ಸಾಂಕೇತಿಕವಾಗಿ 22 ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನದ ಚೆಕ್‍ ವಿತರಿಸಿದರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಂಚೂಣಿಯಲ್ಲಿರುವ ಬಿಡಿಸಿಸಿ ಬ್ಯಾಂಕ್ ಪ್ರಾರಂಭದಲ್ಲಿಯೇ ಕೋವಿಡ್-19 ಪರಿಹಾರ ನಿಧಿಗೆ 50 ಲಕ್ಷ ರೂ.ಗಳನ್ನು ನೀಡಿದೆ. ಅಷ್ಟೇ ಅಲ್ಲದೆ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಕೂಡ ತಮ್ಮ 1 ದಿನದ ಸಂಬಳವನ್ನು ಮೀಸಲಿಟ್ಟು, ಒಟ್ಟು 10 ಲಕ್ಷ ರೂ.ಗಳನ್ನು ಸಂಗ್ರಹಿಸಿ ನೀಡಿದ್ದಾರೆ ಎಂದರು.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ
ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ

ಕೋವಿಡ್-19 ನಿಯಂತ್ರಿಸುವ ಕಾರ್ಯಕ್ಕೆ ತಮ್ಮ ಜೀವವನ್ನು ಲೆಕ್ಕಿಸದೇ ಶ್ರಮಿಸುತ್ತಿರುವ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡಲು ಸರ್ಕಾರ ನಿರ್ಧರಿಸಿತ್ತು. ಇದನ್ನು ಸಹಕಾರ ಇಲಾಖೆಯ ಮೂಲಕ ಭರಿಸಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಬಾಗಲಕೋಟೆ ಡಿಸಿಸಿ ಬ್ಯಾಂಕ್‍ನವರು 20 ಲಕ್ಷ ರೂ.ಗಳನ್ನು ನೀಡಲು ಮುಂದಾಗಿದ್ದಾರೆ. ಉಳಿದ ಹಣವನ್ನು ಬೇರೆ ಬೇರೆ ಸಹಕಾರಿ ಸಂಘಗಳ ಮೂಲಕ ಭರಿಸುವ ಕಾರ್ಯವನ್ನು ಸಹಕಾರ ಇಲಾಖೆ ಮಾಡುತ್ತಿರುವುದಾಗಿ ತಿಳಿಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ, ಆಶಾ ಕಾರ್ಯಕರ್ತೆಯರ ಒಳ್ಳೆಯ ಕಾರ್ಯಕ್ಕೆ ಗೌರವ ಸೂಚಿಸುವ ನಿಟ್ಟಿನಲ್ಲಿ ಈ ಪ್ರೋತ್ಸಾಹಧನ ನೀಡಲಾಗುತ್ತಿದೆ. ಆದ್ದರಿಂದ ಆಶಾ ಕಾರ್ಯಕರ್ತೆಯರು ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ಮುಂದೆಯೂ ಈ ಕಾರ್ಯ ಮುಂದುವರೆಯಲಿ ಎಂದರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಕುಮಾರ ಸರನಾಯಕ ಮಾತನಾಡಿ, ರಾಜ್ಯ ಸರ್ಕಾರ ತೀರ್ಮಾನಿಸಿದಂತೆ ಜಿಲ್ಲೆಯಲ್ಲಿರುವ ಒಟ್ಟು 1409 ಆಶಾ ಕಾರ್ಯಕರ್ತೆಯರ ಪೈಕಿ 667 ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನವನ್ನು ಬ್ಯಾಂಕಿನ ವತಿಯಿಂದ ನೀಡಲು ತೀರ್ಮಾನಿಸಲಾಗಿದೆ. ಸಾಂಕೇತಿಕವಾಗಿ ಕೆಲವರಿಗೆ ಚೆಕ್ ನೀಡಲಾಗಿದೆ. ಇನ್ನು ಎರಡು ದಿನಗಳಲ್ಲಿ ಅವರವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.