ಬಾಗಲಕೋಟೆ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಿಲ್ಲಾಡಳಿತ ಭವನ ಎದುರು ದಲಿತ ಸಂಘರ್ಷ ಸಮಿತಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಸಂಚಾಲಕರಾದ ಹನಮಂತ ಚಿಮ್ಮಲಗಿ, ಶಿವಾನಂದ ಮಾದರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಂಡವಾಳಶಾಹಿ ಹಾಗೂ ಕಾರ್ಪೋರೇಟ್ ಒತ್ತಾಯದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದರೆ ಆಗುವ ಅನಾಹುತಗಳಿಗೆ ನೇರವಾಗಿ ರೈತರೇ ಬಲಿಪಶುಗಳಾಗುತ್ತಾರೆ. ಈ ನಿರ್ಧಾರದಿಂದ ಕೂಡಲೇ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.