ETV Bharat / state

ಸೆ.19 ಜಿಲ್ಲಾ, ತಾಲೂಕು ನ್ಯಾಯಾಲಯದ ಮೆಗಾ ಇ-ಲೋಕ ಅದಾಲತ್: ನೋಂದಣಿಗೆ ಸೆ.18 ಕೊನೆಯ ದಿನ - ಬಾಗಲಕೋಟೆ ಸುದ್ದಿ

ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಸೆ.19ರಂದು ಇ ಅದಾಲತ್ ನಡೆಸಲಾಗುತ್ತಿದೆ. ಸೆ.18ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ ತಿಳಿಸಿದರು.

E-Adalath in bagalakote
ನ್ಯಾಯಾಲಯದ ಮೆಗಾ ಇ-ಲೋಕ ಅದಾಲತ್
author img

By

Published : Sep 1, 2020, 11:50 PM IST

ಬಾಗಲಕೋಟೆ: ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಸೆಪ್ಟೆಂಬರ 19ರಂದು ಬಾಗಲಕೋಟೆ ಜಿಲ್ಲಾ ಮತ್ತು ತಾಲೂಕಾ ನ್ಯಾಯಾಲಯಗಳಲ್ಲಿ ಮೆಗಾ ಇ-ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ ತಿಳಿಸಿದರು.

ನ್ಯಾಯಾಲಯದ ಮೆಗಾ ಇ-ಲೋಕ ಅದಾಲತ್

ಜಿಲ್ಲಾ ನ್ಯಾಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿಯೇ ಇದೇ ಪ್ರಥಮ ಬಾರಿಗೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥ ಮಾಡುವ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಇದನ್ನು ತಂತ್ರಾಂಶದ ಮೂಲಕ ವಕೀಲರ ಸಮ್ಮುಖವಿಲ್ಲದೇ ತಾವೇ ಸ್ವತಃ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.

ಸಂಧಾನದ ಪ್ರಕರಣಗಳ ನೋಂದಣಿಗೆ ಸೆಪ್ಟೆಂಬರ 18 ಕೊನೆಯ ದಿನವಾಗಿದೆ ಎಂದು ತಿಳಿಸಿದರು. ಕೊರೊನಾ ಭೀತಿ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಈಗಾಗಲೇ ಇತ್ಯರ್ಥವಾಗದ ಒಟ್ಟು 42,097 ಪ್ರಕರಣಗಳಿವೆ. ಇದರಲ್ಲಿ 24,245 ಸಿವಿಲ್ ಪ್ರಕರಣಗಳು ಹಾಗೂ 17,852 ಕ್ರಿಮಿನಲ್ ಪ್ರಕರಣಗಳಿವೆ ಎಂದರು.

ಇವುಗಳಲ್ಲಿ ಸಂಧಾನ ಮೂಲಕ ಇತ್ಯರ್ಥಪಡಿಸುವಂತ ಪ್ರಕರಣಗಳನ್ನು ಮೆಗಾ ಇ-ಲೋಕ್ ಅದಾಲತ್ ಮೂಲಕ ಇತ್ಯರ್ಥ ಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 1,815 ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ. ಇನ್ನು ಸೆಪ್ಟೆಂಬರ 18ರವರೆಗೆ ಗುರುತಿಸಲು ಅವಕಾಶವಿದ್ದು, ಇನ್ನು ಹೆಚ್ಚಿನ ಪ್ರಕರಣಗಳನ್ನು ಗುರುತಿಸುವ ಗುರಿ ಹೊಂದಲಾಗಿದೆ ಎಂದರು.

ಮೆಗಾ ಇ-ಲೋಕ್ ಅದಾಲತ್‍ನಲ್ಲಿ ಮೋಟಾರು ವಾಹನ ಅಪಘಾತ ಪ್ರಕರಣಗಳು, ವಿಮಾ ಕಂಪನಿಗಳ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಕಾರ್ಮಿಕ ಸಂಬಂಧಿತ ವಿವಾದ, ಬ್ಯಾಂಕ್ ವಿಷಯಗಳು, ಚೆಕ್ ಬೌನ್ಸ್, ಹಣ ವಸೂಲಾತಿ ಪ್ರಕರಣಗಳು, ಕ್ರಿಮಿನಲ್ ಅಪರಾಧಗಳು, ಎಂಎಸಿಟಿ ಪ್ರಕರಣಗಳು, ಭೂ ಸ್ವಾಧೀನ, ವಿದ್ಯುತ್, ಎಂಎಂಡಿಆರ್ ಕಾಯ್ದೆ ಸಿವಿಲ್ ಪ್ರಕರಣಗಳು ಸೇರಿದಂತೆ ಜನನ ಮತ್ತು ಮರಣ ನೋಂದಣಿ, ಪಿಸಿ ಪ್ರಕರಣಗಳು ಇತರೆ ವಿಷಯಗಳಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಕಕ್ಷಿದಾರರು ಹಾಗೂ ವಕೀಲರು ನ್ಯಾಯಾಲಯಕ್ಕೆ ಹಾಜರಾಗದೇ ಸಂಧಾನಕಾರರು ಪಕ್ಷಗಾರರು ಹಾಗೂ ವಕೀಲರನ್ನು ವಿಡಿಯೋ ಸಂವಾದದ ಮೂಲಕ ಸಂಪರ್ಕಿಸಿ, ಸಂಧಾನ ನಡೆಸಲಾಗುತ್ತಿದೆ. ಅವರಿದ್ದ ಸ್ಥಳ, ಮನೆ, ವಕೀಲರ ಕಚೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ಇ-ಮೇಗಾ ಅದಾಲತ್‍ನಲ್ಲಿ ಭಾಗವಹಿಸಿ, ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಆದ ಕಾರಣ ಪಕ್ಷಗಾರರು ಈ ಕೂಡಲೇ ವಕೀಲರನ್ನು ಸಂಪರ್ಕಿಸಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜೀ ಆಗಬಹುದಾದ ಪ್ರಕರಣಗಳನ್ನು ಸಂಧಾನ ಮೂಲಕ ಯೋಗ್ಯ ಪರಿಹಾರ ಪಡೆದುಕೊಂಡು ಅದಾಲತ್‍ನ ಪ್ರಯೋಜನೆ ಪಡೆದುಕೊಳ್ಳಬಹುದಾಗಿದೆ ಎಂದರು.

ಹೆಚ್ಚಿನ ಮಾಹಿತಿಗಾಗಿ ಬಾಗಲಕೋಟೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಇಮೇಲ್ dlsabagalkot@gmail.com ಅಥವಾ ದೂರವಾಣಿ ಸಂಖ್ಯೆ 08354-235876 ಹಾಗೂ ಆಯಾ ತಾಲೂಕಾ ಕಾನೂನು ಸೇವಾ ಸಮಿತಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಹೇಮಲತಾ ಹುಲ್ಲೂರ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.