ಬಾಗಲಕೋಟೆ : ಈಟಿವಿ ಭಾರತ್ ವರದಿಯ ಫಲ ಶೃತಿಯಿಂದಾಗಿ ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ 150 ಜನರಿಗೆ ಉದ್ಯೋಗವನ್ನು ಜಿಲ್ಲಾಡಳಿತ ನೀಡಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.
ಜಿಲ್ಲೆಯ ಹುನಗುಂದ ತಾಲೂಕಿನ ಮುರಡಿ ಗ್ರಾಮ ಪಂಚಾಯತ್ನ ಅಧ್ಯಕ್ಷರು ಹಾಗೂ ಪಿಡಿಓ ಉದ್ಯೋಗ ಖಾತ್ರಿ ಯೋಜನೆಯಡಿ ಅವ್ಯವಹಾರ ನಡೆಸುತ್ತಿದ್ದು, ಜಾಬ್ ಕಾರ್ಡ್ ನೀಡದೆ ಗ್ರಾಮಸ್ಥರಿಗೆ ವಿನಾಕಾರಣ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪಂಚಾಯತ್ಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದ ವರದಿಯನ್ನು ಜೂನ್ 27 ರಂದು ಈಟಿವಿ ಭಾರತ ವರದಿ ಮಾಡಿತ್ತು.
ಜೂನ್ 27 ರಂದು ಮುರಡಿ ಗ್ರಾಮ ಪಂಚಾಯತ್ ಅವ್ಯವಹಾರ ನಡೆಸಿದ ವರದಿ, ಎಲ್ಲಾ ಅಧಿಕಾರಿಗಳ ಮೊಬೈಲ್ ನಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ವರದಿಗೆ ಸ್ಪಂದಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿ, ಜೆಸಿಬಿ ಬಳಸುತ್ತಿದ್ದ ಉದ್ಯೋಗ ಖಾತ್ರಿ ಯೋಜನೆ ಯಲ್ಲಿ ಈಗ 150 ಜನ ಕೂಲಿ ಕಾರ್ಮಿಕರನ್ನು ಬಳಕೆ ಮಾಡಿಕೊಂಡು ಉದ್ಯೋಗ ನೀಡಿದ್ದಾರೆ ಎಂದು ತಾಲೂಕು ಪಂಚಾಯತ್ ಸದಸ್ಯರಾದ ಮಂಜುನಾಥ ಗೌಡ ತಿಳಿಸಿ, ಈ ಟಿ ವಿ ಭಾರತ್ಗೆ ಅಭಿನಂದನೆ ತಿಳಿಸಿದ್ದಾರೆ.