ETV Bharat / state

ಬಾಗಲಕೋಟೆಯ ಕೇಂದ್ರಿಯ ವಿದ್ಯಾಲಯದಲ್ಲಿ ಪರಿಸರ ದಿನಾಚರಣೆ - World Environment Day

ಬಾಗಲಕೋಟೆ ವಿದ್ಯಾಗಿರಿಯ ಕೇಂದ್ರಿಯ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಅರಣ್ಯ ಇಲಾಖೆ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು. ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ನೇತೃತ್ವ ವಹಿಸಿದ್ದರು.

World Environment Day in Bagalkot
ಬಾಗಲಕೋಟೆಯ ಕೇಂದ್ರಿಯ ವಿದ್ಯಾಲಯದಲ್ಲಿ ಪರಿಸರ ದಿನಾಚರಣೆ
author img

By

Published : Jun 5, 2020, 11:21 PM IST

ಬಾಗಲಕೋಟೆ : ಸಾಮಾಜಿಕವಾಗಿ ನಾವು ಏನು ಮಾಡಬೇಕು, ನಮ್ಮ ವಿವೇಚನೆಯಲ್ಲಿ ಪರಿಸರ ಕಾಳಜಿ ಮುಖ್ಯವಾಗಬೇಕು ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ವಿದ್ಯಾಗಿರಿಯ ಕೇಂದ್ರಿಯ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಅರಣ್ಯ ಇಲಾಖೆ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಮನೆ ಕಟ್ಟುವಾಗ ಗಾಳಿಗಾಗಿ ಹೇಗೆ ಕಿಟಕಿಗಳನ್ನು ಬಿಡುತ್ತೇವೋ, ಅದಕ್ಕೆ ಸರಿಸಮಾನವಾಗಿ ಮನೆಯ ಸುತ್ತಮುತ್ತ ಗಿಡಗಳನ್ನು ನೆಡಬೇಕು. ರಾಮನಗರ ಜಿಲ್ಲೆಯ ಬರಡು ಭೂಮಿಯಲ್ಲಿ ಬಯೋ ಫಾರೆಸ್ಟ್ ನಿರ್ಮಾಣ ಮಾಡಿ ಎರಡು ಎಕರೆ ಇದ್ದದ್ದು, ಈಗ 10 ಎಕರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯ ನವನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಪಕ್ಕದಲ್ಲಿ ಪೊಲೀಸ್ ಇಲಾಖೆ ಬಯೋ ಫಾರೆಸ್ಟ್ ನಿರ್ಮಿಸಿದ್ದಾರೆ. ಇದೇ ತರಹ ಇತರ ಕಡೆಯೂ ಬಯೋಫಾರೆಸ್ಟ್ ನಿರ್ಮಿಸಲು ಅರಣ್ಯ ಇಲಾಖೆ ಮುಂದಾಗಬೇಕು. ಅದಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಜಿ.ಪಂ ಸಿಇಒ ಗಂಗೂಬಾಯಿ ಮಾನಕರ ಮಾತನಾಡಿ, ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಗಿಡ ನೆಡಬೇಕು. ಕಳೆದ ಸಾಲಿನಲ್ಲಿ ಪ್ರತೀ ಗ್ರಾಮ ಪಂಚಾಯತ್​​ ವ್ಯಾಪ್ತಿಯಲ್ಲಿ 500 ಗಿಡಗಳನ್ನು ನೆಡುವ ಗುರಿ ಹೊಂದಲಾಗಿತ್ತು. ಈ ಸಾಲಿನಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಗಿಡಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ನರ್ಸರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಸಿಗಳನ್ನು ಬೆಳೆಸಿ ಜಿಲ್ಲೆಯಲ್ಲಿ ಉತ್ತಮ ವಾತಾವರಣ ನಿರ್ಮಿಸುವ ಕೆಲಸವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರಿಯ ವಿದ್ಯಾಲಯದ ಪ್ರಾಚಾರ್ಯ ಜೆ.ಎನ್.ಪದ್ಮನಾಭನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ದೇವರಾಜ, ಜಿಲ್ಲಾ ಮಾಲಿನ್ಯ ನಿಯಂತ್ರಣಾಧಿಕಾರಿ ಪುರಾಣಿಕ, ವಲಯ ಅರಣ್ಯಾಧಿಕಾರಿಗಳಾದ ವಿ.ಕೆ.ರೂಪಾ, ಜೆ.ಎಸ್.ರಕ್ಕಸಗಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎಸ್.ನೇಗಿನಾಳ ಸೇರಿದಂತೆ ಇತರರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.