ETV Bharat / state

ಬಾಗಲಕೋಟೆ ಅಬಕಾರಿ ಇಲಾಖೆ ಕಾರ್ಯಾಚರಣೆ : ಪಂಜಾಬ್​ ಮೂಲದ ಇಬ್ಬರು ಅರೆಸ್ಟ್ - ಪಂಜಾಬ್​ ಮೂಲದ ಇಬ್ಬರ ಬಂಧನ

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಪಂಜಾಬ್​ನಿಂದ ಜಿಲ್ಲೆಗೆ ಡ್ರಗ್ಸ್​ ತಂದು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

two drug accused
ಪಂಜಾಬ್​ ಮೂಲದ ಇಬ್ಬರು ಪೊಲೀಸ್​ ವಶಕ್ಕೆ
author img

By

Published : Sep 23, 2021, 9:08 PM IST

ಬಾಗಲಕೋಟೆ: ಪಂಜಾಬ್​ನಿಂದ ಜಿಲ್ಲೆಗೆ ಡ್ರಗ್ಸ್​ ಪೂರೈಕೆ ಮಾಡುತ್ತಿದ್ದ ಲಾರಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಅಬಕಾರಿ ಇಲಾಖೆ ಸಿಪಿಐ ಸದಾಶಿವ ಕೊರ್ತಿ

ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಸಿಪಿಐ ಸದಾಶಿವ ಕೊರ್ತಿ ನೇತೃತ್ವದಲ್ಲಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಫೀಮು​ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿದ್ದಾರೆ. ಲಾರಿ ಮೂಲಕ ಅಫೀಮು ಮಾರಲು ಬಂದಿದ್ದ ಪಂಜಾಬ್​​ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಐದಾರು ದಿನಗಳಿಂದ 10 ಕೆಜಿಗೂ ಅಧಿಕ ಅಫೀಮನ್ನು ಇಟ್ಟುಕೊಂಡು ಆರೋಪಿಗಳು ಪಟ್ಟಣದಲ್ಲಿ ತಿರುಗಾಡುತ್ತಿದ್ದರು. ಈ ಕುರಿತಂತೆ ಮಾಹಿತಿ ಪಡೆದ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿತ್ತು.

ಕಾಲೇಜು ವಿದ್ಯಾರ್ಥಿಗಳಿಗೆ, ಡಾಬಾಗಳಿಗೆ ಅಫೀಮು ಅನ್ನು ಮಾರಾಟ ಮಾಡುತ್ತಿದ್ದರು ಎಂದು ಶಂಕಿಸಲಾಗಿದೆ. ಬಂಧಿತರಿಂದ 5 ಲಕ್ಷಕ್ಕೂ ಅಧಿಕ ಮೌಲ್ಯದ ಅಫೀಮನ್ನು ಜಫ್ತಿ ಮಾಡಲಾಗಿದೆ.

ಇದನ್ನೂ ಓದಿ: ಆರ್ಥಿಕ ಶಿಸ್ತು ತರಲು ಅಪ್ರಿಯವಾದರೂ ಕಠಿಣ ಕ್ರಮ ಕೈಗೊಳ್ಳಲಿದ್ದೇನೆ: ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.