ಬಾಗಲಕೋಟೆ: ತಾಲೂಕಿನ ಹೊನ್ನಾಕಟ್ಟಿ ಗ್ರಾಮದ ತೋಟದ ಮನೆಯೊಂದರಲ್ಲಿ ಅಪಾರ ಪ್ರಮಾಣದ ಲಘು ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.
ಈ ಕುರಿತಂತೆ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿ ಮಂಜುನಾಥ ನಾರಾ, ವಿಜಯ ಕಂಕಣ ಸೇರಿದಂತೆ ಮೂವರನ್ನು ಬಂಧಿಸಿದ್ದು, ಗಂಧಕ, ಸೋಡಿಯಂ, ನೈಟ್ರೇಟ್, ಚರ್ಕೋಲ್ ಪೌಡರ್ ಸೇರಿದಂತೆ 250 ಕೆಜಿ ಸಿದ್ಧ ಸ್ಫೋಟಕ, 250 ಕೆಜಿ ಕಚ್ಚಾ ಪೌಡರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪೌಡರ್ಅನ್ನು ಸಂಗ್ರಹಿಸಿ ಸ್ಫೋಟಕಗಳನ್ನು ತಯಾರಿಸುತ್ತಿದ್ದರು ಎಂದು ತಿಳಿದುಬಂದಿದೆ.
ಸ್ಫೋಟಕ ವಸ್ತುಗಳನ್ನು ಅಕ್ರಮವಾಗಿ ಸಾಗಿಸುವ ಹಾಗೂ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಆದರೆ ಯಾವ ಕಾರಣಕ್ಕಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿದ್ದರು ಎಂಬುದು ತನಿಖೆಯಿಂದ ಹೊರ ಬರಬೇಕಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದರು.
ಇದನ್ನೂ ಓದಿ: ನಾಳೆ ಮಧ್ಯಾಹ್ನ 1 ಗಂಟೆಗೆ ಕೋವಿಡ್ ಸಭೆ ಫಿಕ್ಸ್: ವೀಕೆಂಡ್ ಕರ್ಫ್ಯೂ ಭವಿಷ್ಯ ನಿರ್ಧಾರ?