ಬಾಗಲಕೋಟೆ: ತೋಟದ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ ಜಾನುವಾರುಗಳು ಸಹಿತ ಧವಸಧಾನ್ಯ ಬೆಂಕಿಗಾಹುತಿಯಾಗಿರಯವ ಘಟನೆ ಜಮಖಂಡಿ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 10 ಟಗರು, 1 ಆಕಳು ಮತ್ತು 1 ಎತ್ತು ಸೇರಿದಂತೆ ಧವಸ ಧಾನ್ಯಗಳೆಲ್ಲಾ ಭಸ್ಮವಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಗ್ರಾಮದ ಮಾಳಪ್ಪ ಲಕ್ಕೊಡ್ರ ಎಂಬುವವರಿಗೆ ಸೇರಿದ ತೋಟದ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಜಮಖಂಡಿ ಕ್ಷೇತ್ರದ ಶಾಸಕ ಆನಂದ ನ್ಯಾಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡು ರೈತರಿಗೆ ಸಾಂತ್ವನ ಹೇಳಿದರು.
ಈ ಬಗ್ಗೆ ಜಿಲ್ಲಾಧಿಕಾರಿ ಗಳ ಜೊತೆಗೆ ಮಾತನಾಡಿ ಸರ್ಕಾರದಿಂದ ಸಿಗಬೇಕಾಗಿರುವ ಪರಿಹಾರ ಧನ ಬರುವಂತೆ ಮಾಡಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು. ಮಳೆ ಗಾಳಿಯಿಂದ ರೈತರು ಎಚ್ಚರಿಕೆ ವಹಿಸುವುದು ಅಗತ್ಯವಿದೆ ಎಂದರು.