ETV Bharat / state

ಬಿರುಗಾಳಿ ಮಳೆಗೆ ಅಪಾರ ಹಾನಿ: ಅಧಿಕಾರಿಗಳ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಆಕ್ರೋಶ

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ನಗರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದ್ದು, ಅಪಾರ ನಷ್ಟ ಉಂಟಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಮಾಜಿ ಸಚಿವೆ ಉಮಾಶ್ರೀ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Former Minister Umashree outrange against rural offials
ಬಿರುಗಾಳಿ ಮಳೆಗೆ ಅಪಾರ ಹಾನಿ..ಕ್ರಮಕೊಳ್ಳದ ಅಧಿಕಾರಿಗಳ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಆಕ್ರೋಶ
author img

By

Published : Jun 27, 2020, 1:36 AM IST

ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರ ನಗರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದೆ. ಬಿರುಗಾಳಿಗೆ ನಗರದ ಕೇಂದ್ರ ಬಸ್​ ನಿಲ್ದಾಣದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕದ ಮೇಲೆ ಹಳೆಯ ನೀಲಗಿರಿ ಮರಬಿದ್ದು 7 ಲಕ್ಷ ವೆಚ್ಚದ ಯಂತ್ರೋಪಕರಣ ಹಾಗೂ ಶೆಡ್​ ಸಂಪೂರ್ಣ ನಜ್ಜುಗುಜ್ಜಾಗಿದೆ.

ಈ ಘಟಕದಲ್ಲಿ ಕಾರ್ಯ ನಿರ್ವಹಿಸುತಿದ್ದ ಮೂವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಘಟನೆಯಲ್ಲಿ ಜಾವೇದ್ ನದಾಫ ಉರ್ಫ್ ನಾಗರಾಳ ಎಂಬ ಬಾಲಕ ಗಾಯಗೊಂಡಿದ್ದಾನೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವೆ ಉಮಾಶ್ರೀ, ಇಷ್ಟಾದರೂ ಯಾವುದೇ ಕ್ರಮ ಕೈಗೊಳ್ಳದ ಸ್ಥಳೀಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ಆದಷ್ಟು ಬೇಗ ಶಿಥಿಲಗೊಂಡ ನೀರಿನ ಘಟಕ ತೆರವುಗೊಳಿಸುವುದಾಗಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.