ETV Bharat / state

ಸ್ವಾತಂತ್ರ್ಯಕ್ಕಾಗಿ ಗಾಂಧೀಜಿ ನಡೆಸಿದ ಹೋರಾಟ ಜಗತ್ತಿಗೆ ಮಾದರಿ: ಸಚಿವ ಆರ್ ಬಿ ತಿಮ್ಮಾಪೂರ - ಗೌರವವಂದನೆ ಸ್ವೀಕರಿಸಿದ ಸಚಿವ ಆರ್​ ಬಿ ತಿಮ್ಮಪೂರ

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸ್ವಾತಂತ್ರ್ಯೋತ್ಸವ ಹಿನ್ನೆಲೆ ಸನ್ಮಾನಿಸಲಾಯಿತು.

ಗೌರವವಂದನೆ ಸ್ವೀಕರಿಸಿದ ಸಚಿವ ಆರ್​ ಬಿ ತಿಮ್ಮಪೂರ

author img

By

Published : Aug 15, 2023, 6:25 PM IST

Updated : Aug 15, 2023, 7:37 PM IST

ಬಾಗಲಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಾಗಲಕೋಟೆ: ಜಿಲ್ಲಾ ಆಡಳಿತದಿಂದ‌ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ‌ ಸಚಿವ ಆರ್ ಬಿ ತಿಮ್ಮಾಪೂರ ಅವರು 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ನಂತರ ಪೊಲೀಸ್ ಇಲಾಖೆ, ಶಾಲಾ ವಿದ್ಯಾರ್ಥಿಗಳು, ಎನ್​ಸಿಸಿ ಕೆಡೆಟ್‌, ಸ್ಕೌಟ್ಸ್​ ಮತ್ತು ಗೈಡ್ಸ್​, ಗೃಹರಕ್ಷಕ ದಳ, ಮಾಜಿ ಸೈನಿಕರಿಂದ ಗೌರವ ವಂದನೆ ಸ್ವೀಕರಿಸಿದರು.

ನಂತರ ಮಾತನಾಡಿದ ಸಚಿವರು, ಅಹಿಂಸೆ ಎಂಬ ಅಸ್ತ್ರವನ್ನು ಬಳಸಿ ಭಾರತವನ್ನು ಬ್ರಿಟಿಷರಿಂದ ಬಂಧಮುಕ್ತಗೊಳಿಸಿದ ರಾಷ್ಟ್ರಪಿತ ಗಾಂಧೀಜಿಯವರ ಹೋರಾಟ ಜಗತ್ತಿಗೆ ಮಾದರಿ. ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡಿಗರ ಕೊಡುಗೆ ಅಪಾರವಾಗಿದೆ. ನಮ್ಮದು ನುಡಿದಂತೆ‌ ನಡೆಯುವ ಸರ್ಕಾರ ಎಂಬ ಸಂದೇಶವನ್ನು ಜನತೆಗೆ ನೀಡಿದೆ. ದೇಶದಲ್ಲೇ ಪ್ರಥಮವಾಗಿ ವಿನೂತನ ಮಾದರಿಯಲ್ಲಿ ಸರ್ವಜನರ ಏಳಿಗೆಗೆ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ ಎಂದರು.

ನಂತರ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಸಂಸದ‌ ಪಿ ಸಿ ಗದ್ದಿಗೌಡರ, ಶಾಸಕ ಎಚ್ ವೈ ಮೇಟಿ, ವಿಧಾನ ಪರಿಷತ್ ಸದಸ್ಯ ಪಿ ಎಚ್ ಪೂಜಾರ, ಜಿಲ್ಲಾಧಿಕಾರಿ ಕೆ ಎ ಜಾನಕಿ, ಸಿಇಓ ಶಶಿಧರ ಕುರೇರ, ಎಸಿ ಶ್ವೇತಾ ಬೀಡ್ಕರ, ಎಡಿಸಿ ಪರಶುರಾಮ ಶಿನ್ನಾಳಕರ, ತಹಶೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಇನ್ನಿತರರು ಇದ್ದರು.

ದಾವಣಗೆರೆಯಲ್ಲಿ ಅದ್ಧೂರಿಯಾಗಿ ಜರುಗಿದ 77ನೇ ಸ್ವಾತಂತ್ರ್ಯೋತ್ಸವ: ಜಿಲ್ಲೆಯಲ್ಲಿಂದು 77ನೇ ಸ್ವಾತಂತ್ರ್ಯೋತ್ಸವ ದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಗು ದಾವಣಗೆರೆ ಉಸ್ತುವಾರಿ ಸಚಿವ ಎಸ್​ ಎಸ್​ ಮಲ್ಲಿಕಾರ್ಜುನ್ ಧ್ವಜಾರೋಹಣ ನೆರವೇರಿಸಿದರು. ದಾವಣಗೆರೆ ಜಿಲ್ಲಾಡಳಿತದಿಂದ ನಗರದ ಜಿಲ್ಲಾಕ್ರೀಡಾಂಗಣದಲ್ಲಿ ಆಯೋಜನೆ ಮಾಡಿದ್ದಾ 77ನೇ‌ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್‌ರವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ತಮ್ಮ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದೇ ನಮ್ಮ ಗುರಿ ಎಂದು ಹೇಳಿದರು.

ದಾವಣಗೆರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಧ್ವಜಾರೋಹಣ ನೆರವೇರಿಸಿದ ಬಳಿಕ ಸಚಿವ ಎಸ್​ ಎಸ್ ಮಲ್ಲಿಕಾರ್ಜುನ್ ಅವರು ತೆರೆದ ವಾಹನದಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್, ಕೆ.ಎಸ್.ಆರ್.ಪಿ ಹಾಗೂ ಡಿ.ಎ.ಆರ್ ಗೃಹ ರಕ್ಷಕ ದಳದವರು, ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಆಕರ್ಷಕ ಪರೇಡ್ ನಡೆಸಿದರು. ಈ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ದುಡಿದ ಕೆಲ ದಾವಣಗೆರೆ ಸೇನಾನಿಗಳನ್ನು ಜಿಲ್ಲಾಡಳಿತದಿಂದ ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ವಿವಿಧ ಶಾಲೆಗಳ ಮಕ್ಕಳು ದೇಶ ಭಕ್ತಿ ಗೀತೆಗಳಿಗೆ ನೃತ್ಯ ಮಾಡಿದರು. ಈ ವೇಳೆ ಜಿಲ್ಲಾಧಿಕಾರಿ ಎಂವಿ ವೆಂಕಟೇಶ್, ಎಸ್ಪಿ ಡಾ ಅರುಣ್ ಕೆ ಅವರು ಭಾಗಿಯಾಗಿದ್ದರು.

ಇದನ್ನೂ ಓದಿ: ಸುಪ್ರೀಂಗೆ ಸಲ್ಲಿಸಿರುವ ಮನವಿಯಂತೆ ತಮಿಳುನಾಡಿಗೆ ನಿತ್ಯ 24 ಟಿಎಂಸಿ ನೀರು ಹರಿಸಲು ಸಾಧ್ಯವೇ ಇಲ್ಲ: ಸಚಿವ ಬೋಸರಾಜ್

Last Updated : Aug 15, 2023, 7:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.