ETV Bharat / state

ಕ್ಷೀರಭಾಗ್ಯ ಯೋಜನೆಯ ಹಾಲಿನ ಪ್ಯಾಕೇಟ್ ಅಕ್ರಮ ದಾಸ್ತಾನು : ಅಧಿಕಾರಿಗಳಿಂದ ದಾಳಿ - Bagalkote latest news

ಕ್ಷೀರ ಭಾಗ್ಯ ಯೋಜನೆಯ ನಂದಿನಿ ಹಾಲಿನ ಪುಡಿಯ ಪ್ಯಾಕೇಟ್​ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮನೆಯೊಂದರ ಮೇಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Mike packet
Mike packet
author img

By

Published : Aug 28, 2020, 10:35 PM IST

ಬಾಗಲಕೋಟೆ : ಕ್ಷೀರ ಭಾಗ್ಯ ಯೋಜನೆಯ ನಂದಿನಿ ಹಾಲಿನ ಪುಡಿಯ ಪ್ಯಾಕೇಟ್​ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮನೆಯೊಂದರ ಮೇಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಗರದ ಮೋಮಿನ ಗಲ್ಲಿಯ ಮನೆಯೊಂದರಲ್ಲಿ ಅಕ್ರಮವಾಗಿ ಒಂದು ಕೆ.ಜಿ ಹಾಗೂ ಅರ್ಧ ಕೆಜಿ ತೂಕದ ಹಾಲಿನ ಪುಡಿಯ ಪ್ಯಾಕೇಟ್‌ಗಳಿದ್ದ ಮೂಟೆಗಳನ್ನು ಸಂಗ್ರಹಿಸಿಡಲಾಗಿತ್ತು.

ಈ ಕುರಿತು ಖಚಿತ ಮಾಹಿತಿ ಪಡೆದು ಅಕ್ಷರ ದಾಸೋಹ ಅಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ ದಾಳಿ ನಡೆಸಿ ಅಲ್ಲಿದ್ದ ಹಾಲಿನ ಪ್ಯಾಕೇಟ್​ಗಳ ಮೂಟೆಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಅಧಿಕಾರಿ ಬಸವರಾಜ ಐನಾಪೂರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಸಿಡಿಪಿಓ ಆನಂದ ಹಾಗೂ ಸಿಬ್ಬಂದಿ ಜಂಬಗಿ, ಪೊಲೀಸ್ ಸಿಬ್ಬಂದಿ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.