ಬಾಗಲಕೋಟೆ: ನಗರದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 11ನೇ ಪದವಿ ಪ್ರಧಾನ ಸಮಾರಂಭ ನಡೆಯಿತು.
ಸಮಾರಂಭದಲ್ಲಿ ವೈದ್ಯಕೀಯ ಅಧ್ಯಯನ ಮುಗಿಸಿದ 134 ವಿದ್ಯಾರ್ಥಿಗಳಿಗೆ ಪದವಿ ನೀಡಲಾಯಿತು. ಈ ವೇಳೆ ರ್ಯಾಂಕ್ ಪಡೆದ 10 ವಿದ್ಯಾರ್ಥಿಗಳಿಗೆ ವಿಶೇಷ ಪ್ರಶಸ್ತಿ ನೀಡಲಾಯಿತು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಪ್ರೊ. ಪ್ರಮೋದ ಭೀ ಗಾಯಿ ಹಾಗೂ ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷರಾದ ಶಾಸಕ ವೀರಣ್ಣ ಚರಂತಿಮಠ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿದರು.
ಈ ವೇಳೆ ಕೆ.ಯು.ಡಿ ವಿಶ್ರಾಂತ ಉಪಕುಲಪತಿ ಪ್ರೊ. ಪ್ರಮೋದ ಭೀ ಗಾಯಿ ಮಾತನಾಡಿ, ವೈದ್ಯಕೀಯ ವೃತ್ತಿ ಅಂದರೆ ದೇವರ ಸಮಾನ. ವೈದ್ಯರನ್ನು ಪ್ರತಿಯೊಬ್ಬ ರೋಗಿಗಳು ಜೀವ ಉಳಿಸುವ ದೇವರು ಎಂದು ನಂಬುತ್ತಾರೆ. ಆ ನಂಬಿಕೆಯನ್ನು ಉಳಿಸಿಕೊಂಡು ಹೋಗುವುದು ಅಗತ್ಯವಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಭೋಧಿಸಲಾಯಿತು.